ಬಂಟ್ವಾಳ ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಬೆಳಿಗ್ಗೆ ಪೌರಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಮಧ್ಯಾಹ್ನ ಸಭಾ ಕಾರ್ಯಕ್ರಮ ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸರ್ಕಾರಿ ಆಸ್ಪತ್ರೆಯ ವೈದ್ಯರು ವೈಯಕ್ತಿಕ ಆರೋಗ್ಯ ಕಾಪಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕಾಯಂಗೊಂಡ ಪೌರಕಾರ್ಮಿಕರಿಗೆ ಜಿಲ್ಲಾಧಿಕಾರಿಗಳು ನೀಡಿದ ನೇಮಕಾತಿ ಆದೇಶ ವಿತರಿಸಲಾಯಿತು. ನಂತರ ಪೌರಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು, ಚಾಲಕರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅಧ್ಯಕ್ಷತೆ ವಹಿಸಿದ್ದು, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಹರಿಪ್ರಸಾದ್, ಶಶಿಕಲಾ, ದೇವಕಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ವಸಂತಿ ಉಪಸ್ಥಿತರಿದ್ದರು. ದ್ವಿತೀಯ ದರ್ಜೆ ಸಹಾಯಕಿ ರಮಣಿ ಪ್ರಾರ್ಥನೆ ನೆರವೇರಿಸಿ ಕಚೇರಿ ಸಹಾಯಕಿ ಸುಶೀಲ ಸ್ವಾಗತಿಸಿದರು. ಸಮುದಾಯ ಸಂಘಟಕರಾದ ಉಮಾವತಿ ಕಾರ್ಯಕ್ರಮ ನಿರೂಪಿಸಿ, ವಂದನೆ ಸಲ್ಲಿಸಿದರು. ಅಭಿಯಂತರರ ಸಹಾಯಕ ಇಕ್ಬಾಲ್ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಹಕರಿಸಿದರು.
Be the first to comment on "ಬಂಟ್ವಾಳ ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆ"