ಬಂಟ್ವಾಳ

ಸ್ಕೌಟ್ ಮತ್ತು ಗೈಡ್ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅವರಿಗೆ ಸನ್ಮಾನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ತಾಲೂಕು ಒಕ್ಕೂಟ ಸಮಿತಿ ಬಂಟ್ವಾಳ ಮತ್ತು ರೋಟರಿ ಕ್ಲಬ್ ಬಂಟ್ವಾಳ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತುಗೈಡ್ಸ್ ನ ಪ್ರಧಾನ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಅವರ 75ನೇ ಹುಟ್ಟುಹಬ್ಬ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮವು ಬಿ.ಸಿ.ರೋಡ್ ನ ರೋಟರಿ ಕ್ಲಬ್ ಸಭಾಂಗಣದಲ್ಲಿ ಜರಗಿತು.

ಸಮಾರಂಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಮಾಜಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್‌ ಕಾರಂತ್‌ ಅಧ್ಯಕ್ಷತೆ ವಹಿಸಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್, ರಾಜ್ಯ ಸಂಘಟನಾ ಆಯುಕ್ತರಾದ ಪ್ರಭಾಕರ್ ಭಟ್, ರೋಟರಿ ಕ್ಲಬ್ ಬಂಟ್ವಾಳ ದ ಅಧ್ಯಕ್ಷರಾದ ಪ್ರಕಾಶ್ ಬಾಳಿಗಾ, ಕಾರ್ಯದರ್ಶಿ ಸದಾಶಿವ ಬಾಳಿಗಾ ,ಒಕ್ಕೂಟದ ಉಪಾಧ್ಯಕರಾದ ಜೆ. ಪ್ರಹ್ಲಾದ್ ಶೆಟ್ಟಿ, ಸಂಘಟಕರಾದ ಜಗನ್ನಾಥ್‌ ಚೌಟ ಬದಿಗುಡ್ಡೆ, ಶಿಕ್ಷಣ ಸಂಯೋಜಕರಾದ ಸುಜಾತ, ಸುಧಾ, ಒಕ್ಕೂಟದ ಖಜಾಂಚಿ ಇಬ್ರಾಹಿಂ ಉಪಸ್ಥಿತರಿದ್ದರು. ಪ್ರಕಾಶ್‌ ಕಾರಂತ್ ಸ್ವಾಗತಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಂತ್ ನಾಯಕ್ ವಂದಿಸಿ, ಒಕ್ಕೂಟದ ಉಪಾಧ್ಯಕ್ಷರಾದ ಬಿ.ಎಂ.ತುಂಬೆ ಕಾರ್ಯಕ್ರಮ ನಿರೂಪಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ