ಮಂಗಳವಾರ ನಸುಕಿನ ವೇಳೆಗೆ ಮಂಗಳೂರಿನ ಬೆಂಗ್ರೆ ಸಮೀಪ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಬೆಂಕಿಗೆ ಭಸ್ಮವಾದ ಘಟನೆ ನಡೆದಿದೆ. ಇಂದು ಮುಂಜಾನೆ 4.30 ಕ್ಕೆ ಈ ಘಟನೆ ನಡೆದಿದೆ.ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿರಬಹುದು ಎಂದು ಸಂಶಯಿಸಲಾಗಿದೆ. ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಆಕಸ್ಮಿಕಕ್ಕೆ ಕಾರಣ ತಿಳಿದುಬಂದಿಲ್ಲ.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)