ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ಕಲ್ಲಡ್ಕ ಸಮೀಪ ದಾಸಕೋಡಿ ಎಂಬಲ್ಲಿ ನಡೆದಿದೆ. ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನಾ (23) ಮೃತಪಟ್ಟವರು.
ಜಾಹೀರಾತು
ಇವರು ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ, ಮನೆಗೆ ಮರಳುತ್ತಿದ್ದ ವೇಳೆ ದಾಸಕೋಡಿ ಎಂಬಲ್ಲಿ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ. ಸಂಜೆ ಸುಮಾರು 6.30ರ ವೇಳೆ ಈ ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು, ಕಾರು ಕೂಡ ಪಲ್ಟಿಯಾಗಿದೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹೆದ್ದಾರಿಯಲ್ಲಿ ದುರಂತ: ಕಾರು ಡಿಕ್ಕಿ, ರಸ್ತೆ ದಾಟುತ್ತಿದ್ದ ಯುವತಿ ಮೃತ್ಯುವಶ"
Be the first to comment on "ಹೆದ್ದಾರಿಯಲ್ಲಿ ದುರಂತ: ಕಾರು ಡಿಕ್ಕಿ, ರಸ್ತೆ ದಾಟುತ್ತಿದ್ದ ಯುವತಿ ಮೃತ್ಯುವಶ"