ಕಲ್ಲಡ್ಕ

ಹೆದ್ದಾರಿಯಲ್ಲಿ ದುರಂತ: ಕಾರು ಡಿಕ್ಕಿ, ರಸ್ತೆ ದಾಟುತ್ತಿದ್ದ ಯುವತಿ ಮೃತ್ಯುವಶ

ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ಕಲ್ಲಡ್ಕ ಸಮೀಪ ದಾಸಕೋಡಿ ಎಂಬಲ್ಲಿ ನಡೆದಿದೆ. ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನಾ (23) ಮೃತಪಟ್ಟವರು.

ಜಾಹೀರಾತು

ಇವರು ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ, ಮನೆಗೆ ಮರಳುತ್ತಿದ್ದ ವೇಳೆ ದಾಸಕೋಡಿ ಎಂಬಲ್ಲಿ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ. ಸಂಜೆ ಸುಮಾರು 6.30ರ ವೇಳೆ ಈ ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು, ಕಾರು ಕೂಡ ಪಲ್ಟಿಯಾಗಿದೆ. ಯುವತಿಯ ಮೃತದೇಹವನ್ನು  ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.  ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಕಾಂಕ್ರೀಟ್ ರಸ್ತೆಯಲ್ಲಿ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts