ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಅ.15ರಿಂದ 24 ರ ವರೆಗೆ ಶರನ್ನವರಾತ್ರಿ ಮಹೋತ್ಸವ ಜರಗಲಿದೆ. ಈ ಸಂದರ್ಭದಲ್ಲಿ ಭಜನ್ ಸಂಧ್ತಾ ಯಕ್ಷಗಾನ ಬಯಲಾಟ, ಭರತನಾಟ್ಯ, ತಾಳಮದ್ದಳೆ ಮೊದಲಾದ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯ ಜರಗಲಿದೆ. ರಾಮಚಂದ್ರಾಪುರ ಶ್ರೀ ರಾಘವೇಶ್ವರ ಸ್ವಾಮೀಜಿ ಅವರ ಅನುಗ್ರಹದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ಮಾರ್ಗದರ್ಶನದಲ್ಲಿ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ದೇವಸ್ಥಾನದ ವನದುರ್ಗಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಜತ್ತನಕೋಡಿ ಸುಂದರ ಭಟ್ ಮತ್ತು ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಆಂಗರಾಜೆ ಈಶ್ವರ ಜೋಯಿಸ ತಿಳಿಸಿದ್ದಾರೆ.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…