ವಿಟ್ಲ

400 ಕೆ.ವಿ ವಿದ್ಯುತ್ ಮಾರ್ಗ ಬೆಂಬಲಿಸಿದರೆ ಜನಪ್ರತಿನಿಧಿಗಳಿಗೆ ಕರಿಪತಾಕೆ ಪ್ರದರ್ಶನ: ರೈತಸಂಘ ವಾರ್ನಿಂಗ್

ನಂದಿಕೂರು ಕಾಸರಗೋಡು 400 ಕೆ. ವಿ. ವಿದ್ಯುತ್ ಪ್ರಸರಣ ಮಾರ್ಗಕ್ಕೆ ಬೆಂಬಲಿಸಿದರೆ ಶಾಸಕರು ಸಹಿತ ಜನಪ್ರತಿನಿಧಿಗಳಿಗೆ ಕಪ್ಪುಬಾವುಟ ತೋರಿ ಪ್ರತಿಭಟಿಸಲಾಗುವುದು ಎಂದು ರೈತ ಪ್ರತಿನಿಧಿಗಳು ಎಚ್ಚರಿಸಿದ್ದಾರೆ.

ಜಾಹೀರಾತು

ವಿಟ್ಲದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಜಿಲ್ಲಾ ರೈತಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ ಬೈಲಗುತ್ತು, ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಮತದಾರನ ಆಶೋತ್ತರಗಳಿಗೆ ಸ್ಪಂದಿಸುವ ಬದ್ಧತೆ ಹೊಂದಿರುವುದು ಅಗತ್ಯ ಎಂದರು.400 ಕೆ.ವಿ.ವಿದ್ಯುತ್ ಪ್ರಸರಣ ಮಾರ್ಗ ದಿಂದ ಸಂತ್ರಸ್ತರಾಗಲಿರುವ ಕೃಷಿಕರಾದ ಕೃಷ್ಣಮೂರ್ತಿ ಹಾಗೂ ನಾರಾಯಣ ಭಂಡಾರಿ ಅವರ ಪುತ್ರ ಉಪಸ್ಥಿತರಿದ್ದು ಪೂರಕ ಮಾಹಿತಿ ಒದಗಿಸಿದರು.ಮುಖಂಡರಾದ ರಾಜೀವ ಗೌಡ ಅಣ್ಣು ಗೌಡ, ಚಿತ್ತರಂಜನ್ ಮತ್ತಿತರರುಉಪಸ್ಥಿತರಿದ್ದು ಪೂರಕ ಮಾಹಿತಿ ಒದಗಿಸಿದರು‌.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts