ಬೆಂಗಳೂರಿನಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ ಹಣ ಪತ್ತೆಯಾದ ಪ್ರಕರಣವನ್ನು ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡಿನಲ್ಲಿ ಸೋಮವಾರ ಬೆಳಗ್ಗೆ ಪ್ರತಿಭಟನೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಳೆದ ಬಾರಿ ಚುನಾವಣಾ ಪ್ರಚಾರದ ಸಂದರ್ಭ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ ಮಾತನ್ನು ನೆನಪಿಸಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೆ, ಕರ್ನಾಟಕವನ್ನು ಎಟಿಎಂ ಮಾಡುತ್ತದೆ ಎಂಬುದು ಈಗ ಸಾಬೀತಾಗುತ್ತಿದೆ ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮಾತನಾಡಿ, ಬಿಜೆಪಿ ಸರಕಾರವಿದ್ದಾಗ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಗೆ ಅದನ್ನು ಸಾಬೀತುಪಡಿಸಲು ಆಗಿರಲಿಲ್ಲ. ಆದರೆ ಈಗ ಗುತ್ತಿಗೆದಾರನ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿರುವುದಕ್ಕೆ ಸರಿಯಾದ ತನಿಖೆ ಅವಶ್ಯ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ರಾಜ್ಯ ನಾಯಕಿ ಸುಲೋಚನಾ ಜಿ.ಕೆ.ಭಟ್, ಜಿಪಂ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬುಡಾ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಸಹಿತ ವಿವಿಧ ಮೋರ್ಚಾಗಳ ಪ್ರಮುಖರು, ಪುರಸಭೆ ಸದಸ್ಯರು, ಪಕ್ಷ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)