ಪಾಣೇರ್ ಸಂಕ: ಘನವಾಹನ ಸಂಚರಿಸದಂತೆ ಹಾಕಿದ ತಡೆ ಕುಸಿತ, ವಾಹನ ಡಿಕ್ಕಿಯಾಗಿ ಘಟನೆ

ಬ್ರಿಟಿಷರ ಕಾಲದ ಪಾಣೆಮಂಗಳೂರು ಹಳೆಯ ಸೇತುವೆ  ರಸ್ತೆಯಲ್ಲಿ ಬಿರುಕು ಕಂಡ ಕಾರಣ, ಘನಗಾತ್ರದ ವಾಹನಗಳು ಸಂಚಾರ ಮಾಡಬಾರದು ಎಂದು ಹಾಕಲಾಗಿದ್ದ ಕಬ್ಬಿಣದ ತಡೆ ವಾಹನವೊಂದು ಡಿಕ್ಕಿ ಹೊಡೆದು ಶನಿವಾರ ಬೆಳಗ್ಗೆ ಕುಸಿದುಬಿದ್ದಿದೆ.

ಜಾಹೀರಾತು

1914ರಲ್ಲಿ ನಿರ್ಮಿಸಲಾದ ಪಾಣೆಮಂಗಳೂರು ಸೇತುವೆಯ ರಸ್ತೆಯ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಲಾರಿ ಸಹಿತ ಇತರ ಘನವಾಹನಗಳು ಸಂಚಾರ ಮಾಡದಂತೆ  ಬಂಟ್ವಾಳ ಪುರಸಭೆ ಸೇತುವೆಯ ಎರಡು ಬದಿಗಳಲ್ಲಿ ಕಬ್ಬಿಣದ ಪಿಲ್ಲರ್ ಗಳನ್ನು ಹಾಕಿ ಅದರ ಮೇಲೆ ಅಡ್ಡಲಾಗಿ ರಾಡ್ ಹಾಕುವ ಕಾರ್ಯ ಮಾಡಿತ್ತು.

ಆದರೆ ಸೇತುವೆ ಪ್ರವೇಶಕ್ಕೆ ಮೊದಲು ಘನಗಾತ್ರದ ವಾಹನಗಳ ನಿರ್ಬಂಧ ಮಾಡಲಾಗಿರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸದ ಕಾರಣ, ಗೂಡ್ಸ್ ಟೆಂಪೋ ವೊಂದು ಸೇತುವೆಯಲ್ಲಿ ಸಂಚಾರ ಮಾಡಿದ ಸಂದರ್ಭ ರಾಡ್ ಕೆಳಕ್ಕುರಳಿ ಬಿದ್ದಿದೆ. ಅದೃಷ್ಟವಶಾತ್ ರಾಡ್ ಬೀಳುವ ವೇಳೆ ಹಿಂಬದಿಯಿಂದ ವಾಹನವಿಲ್ಲದ ಕಾರಣಕ್ಕಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಾಹನದ ಮೇಲ್ಬಾಗ ಡಿಕ್ಕಿಯಾದ ಪರಿಣಾಮ ರಾಡ್ ಕೆಳಗುರುಳಿದೆ. ಈ ಸಂದರ್ಭ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಬಳಿಕ ಮತ್ತೆ ರಾಡ್ ನ್ನು ಮೇಲಕ್ಕೆ ಸಿಕ್ಕಿಸಿದ್ದಾರೆ. ಮತ್ತೆ ಘನಗಾತ್ರದ ವಾಹನಗಳು ಗೊತ್ತಿಲ್ಲದೆ ಸೇತುವೆಯಲ್ಲಿ ಸಂಚಾರ ಮಾಡಿ ಕಬ್ಬಿಣದ ರಾಡ್ ಮತ್ತೆ ಬೀಳುವ ಸಾಧ್ಯತೆಯೂ ಇದ್ದು, ಇಲ್ಲಿ ಸೇತುವೆ ಸಿಗುವ ಆರಂಭದಲ್ಲೇ ಎರಡೂ ಬದಿಗಳಲ್ಲಿ ಘನವಾಹನ ಸಂಚಾರ ನಿಷೇಧದ ಬೋರ್ಡ್ ಗಳನ್ನು ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪಾಣೇರ್ ಸಂಕ: ಘನವಾಹನ ಸಂಚರಿಸದಂತೆ ಹಾಕಿದ ತಡೆ ಕುಸಿತ, ವಾಹನ ಡಿಕ್ಕಿಯಾಗಿ ಘಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*