ಬಂಟ್ವಾಳದ ವಿವಿಧ ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಸಂಭ್ರಮ. ಈ ಸಂದರ್ಭ ಸದಾ ಯೂನಿಫಾರ್ಮ್ ನಲ್ಲಿರುವ ಪೊಲೀಸರು ಸಾಂಪ್ರದಾಯಿಕ ದಿರಿಸಿನೊಂದಿಗೆ ಗಮನ ಸೆಳೆದರು.
ಮೆಲ್ಕಾರ್ ನಲ್ಲಿರುವ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಆಯುಧ ಪೂಜೆ ನಡೆಯಿತು. ಈ ಸಂದರ್ಭ ಟ್ರಾಫಿಕ್ ಎಸ್.ಐ.ಸುತೇಶ್ ಮತ್ತು ಸಂಜೀವ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಂಟ್ವಾಳ ನಗರ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಇನ್ಸ್ ಪೆಕ್ಟರ್ ಅನಂತಪದ್ಮನಾಭ, ಎಸ್.ಐ.ಗಳಾದ ರಾಮಕೃಷ್ಣ, ಕಲೈಮಾರ್ ಸಹಿತ ಸಿಬಂದಿ ಉಪಸ್ಥಿತರಿದ್ದರು.
ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ನೇತೃತ್ವದಲ್ಲಿ ಆಯುಧ ಪೂಜೆ ಬಂಟ್ವಾಳ ಡಿವೈಎಸ್ಪಿ ಕಚೇರಿಯಲ್ಲಿ ನಡೆಯಿತು.