ಬಂಟ್ವಾಳ

ಭ್ರಷ್ಟಾಚಾರ ವಿರುದ್ಧ ಅರಿವು: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಾರ್ಯಕ್ರಮ

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ  ಬಂಟ್ವಾಳ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆಯಿತು. ಬಂಟ್ವಾಳ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಸಿಬ್ಬಂದಿ ಕೊರತೆ ಮತ್ತು ಒತ್ತಡಗಳ ಹೊರತಾಗಿಯೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದು ಪ್ರತಿ ಸರ್ಕಾರಿ ನೌಕರನ ಜವಾಬ್ದಾರಿಯಾಗಿದೆ ಎಂದು ಈ ಸಂದರ್ಭ ತಹಸೀಲ್ದಾರ್ ತಿಳಿಸಿದರು.

ಜಾಹೀರಾತು

ಕಚೇರಿಗೆ ಬರುವ ಕಡತಗಳನ್ನು ಸಕಾರಣಗಳಿಲ್ಲದೇ ತಿರಸ್ಕರಿಸಬಾರದು. ಸಾರ್ವಜನಿಕರನ್ನು ಪದೇ ಪದೇ ಅಲೆದಾಡುವಂತೆ ಮಾಡಬಾರದು. ಸಾರ್ವಜನಿಕರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಬೇಕು ಎಂದು  ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಹೇಳಿದರು.

ಈ ಸಂದರ್ಭದಲ್ಲಿ ಖಜಾನಾಧಿಕಾರಿ ಮಹೇಶ್, ಉಪನೊಂದಾವಣಾಧಿಕಾರಿ ಕವಿತಾ, ಭೂಮಾಪನ ಇಲಾಖೆಯ ಪರ್ಯಾವೇಕ್ಷಕರಾದ ಮರುಲಪ್ಪ,  ಉಪತಹಸೀಲ್ದಾರ್ ದಿವಾಕರ ಮುಗುಳೀಯ, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ನಿರೂಪಿಸಿ ಕಂದಾಯ ನಿರೀಕ್ಷಕರಾದ ಜನಾರ್ದನ್ ಜೆ ಸ್ವಾಗತಿಸಿ ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು ವಂದಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ