ಲೊರೆಟ್ಟೊ: ಲಾರಿ ಡಿಕ್ಕಿಯಾಗಿ ಕಾರು ಜಖಂ

ಲೊರೆಟ್ಟೊದಲ್ಲಿ ಗುರುವಾರ ಬೆಳಗ್ಗೆ ನಡೆದ ಘಟನೆಯಲ್ಲಿ ಜಲ್ಲಿ ಸಾಗಿಸುವ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಯಾರಿಗೂ ಏನೂ ಅಪಾಯ ಉಂಟಾಗಿಲ್ಲ. ಬ್ಯಾರಿಕೇಟ್ ಹಾಕಿದ ಜಾಗದಲ್ಲೂ ವಾಹನದ ಚಾಲಕರು ಅವುಗಳನ್ನು ಗಮನಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆತಂಕ.

ಲಾರಿಯ ಚಾಲಕರು ರಸ್ತೆ ಕಡೆ ಗಮನ ಕೊಡುವುದಿಲ್ಲ, ಲಾರಿಯಲ್ಲಿ ಅಧಿಕ ಭಾರ ಹೊರಲಾಗುತ್ತದೆ, ಎಂದು ದೂರಿದ ಸಾರ್ವಜನಿಕರು, ಇತರ ವಾಹನಗಳ ಬಗ್ಗೆ ಗಮನವಿಲ್ಲದೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬರುತ್ತಾರೆ ಎಂದು ಸ್ಥಳಕ್ಕೆ ಆಗಮಿಸಿದ ಪೊಲೀಸರಲ್ಲಿ ದೂರಿದರು. ಅಪಘಾತ ನಡೆದ ಜಾಗದಲ್ಲಿ ಶಾಲೆಯಿದ್ದು, ಮಕ್ಕಳು ಶಾಲೆಗೆ ಬರುವ ಸಮಯದಲ್ಲಿ  ಅತೀ ವೇಗ ಮತ್ತು  ಅಜಾಗರೂಕತೆಯ ಚಾಲನೆ ಮಾಡಿದರೆ ಅನಾಹುತಗಳು ನಡೆಯಬಹುದು, ಎಂದು ಆರೋಪಿಸಿರುವ ಸಾರ್ವಜನಿಕರು, ಲಾರಿಗಳಿಗೆ ಸ್ಪೀಡ್ ಕಂಟ್ರೋಲ್ ಹಾಕಿ ಎಂದು ಒತ್ತಾಯಿಸಿದರು. ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್, ಮತ್ತು ಸಂಜೀವ ಹಾಗೂ ಎಎಸ್.ಐ  ಸುರೇಶ್ ಪಡಾರ್, ಸಿಬ್ಬಂದಿಗಳಾದ ರಾಜು, ವಿವೇಕ್, ಸಂತೋಷ ಬೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಲೊರೆಟ್ಟೊ: ಲಾರಿ ಡಿಕ್ಕಿಯಾಗಿ ಕಾರು ಜಖಂ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*