ಬುಧವಾರ ರಾತ್ರಿ ಸುರಿದ ಬಾರಿ ಮಳೆಗೆ ತಾಲೂಕಿನ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಎಂಬಲ್ಲಿರುವ ಗೂಡಂಗಡಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಬಸ್ ನಿಲ್ದಾಣದ ಬಳಿಯಿರುವ ಸುಂದರ ಎಂಬವರ ಗೂಡಂಗಡಿ ಮೇಲೆ ಮರ ಬಿದ್ದು ಗೂಡಂಗಡಿ ಸಂಪೂರ್ಣ ಜಖಂಗೊಂಡಿದೆ. ಜೊತೆಗೆ ಬಸ್ ತಂಗುದಾನದ ಮೇಲೆ ಕೂಡ ಹಾನಿಯಾಗಿದೆ. ಬಸ್ ನಿಲ್ದಾಣದ ಹಂಚು ಪುಡಿಯಾಗಿದೆ. ಅದೃಷ್ಟವಶಾತ್ ರಾತ್ರಿ ವೇಳೆ ಆಗಿದ್ದರಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಯಾರು ಇರದಿದ್ದ ಕಾರಣದಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಮ್ಟಾಡಿ ಗ್ರಾಮಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಸ್ಥಳೀಯರ ನೆರವಿನಿಂದ ಕೂಡಲೇ ಮರವನ್ನು ಕಡಿದು ತೆರವುಗೊಳಿಸಿದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಲ್ಲಿ ಏಪ್ರಿಲ್ 2ರಂದು ನಡೆಯುವ ಕಾರ್ಯಕ್ರಮಗಳು ಇವು. (more…)