ಪ್ರಮುಖ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಅಭಾವ ಇಲ್ಲ: ಸಾಕಷ್ಟು ಮರಳು ಲಭ್ಯ- ಗಣಿ ಇಲಾಖೆ

ದಕ್ಷಿಣ ಕನ್ನಡ ಜಿಲ್ಲೆಯ ನಾನ್ ಸಿಆರ್ ಝಡ್  ಪ್ರದೇಶದ ನದಿ ಪಾತ್ರಗಳಲ್ಲಿ 25 ಮರಳು ಗಣಿ ಗುತ್ತಿಗೆಗಳನ್ನು ಮಂಜೂರು ಮಾಡಲಾಗಿದ್ದು, ಆ ಪೈಕಿ 24 ಮರಳು ಗಣಿ ಗುತ್ತಿಗೆಗಳು ಚಾಲ್ತಿಯಲ್ಲಿವೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಗಾರಿನ ಕಾರಣಕ್ಕೆ ಪರಿಸರ ವಿಮೋಚನಾ ಪತ್ರದಲ್ಲಿ ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಜೂನ್‍ನಿಂದ ಅಕ್ಟೋಬರ್ 15 ರವರೆಗೆ ಮರಳು ತೆಗೆಯಲು ನಿರ್ಬಂಧವಿರುತ್ತದೆ. ಆದರೆ ಮಾನ್ಸೂನ್ ಅವಧಿಯಲ್ಲಿ ಈ ಮರಳು ಬ್ಲಾಕ್ ಗುತ್ತಿಗೆ ಪ್ರದೇಶಗಳ ಸ್ಟಾಕ್‍ಯಾರ್ಡ್‍ಗಳಲ್ಲಿ ಸುಮಾರು 1,02,467 ಮೆಟ್ರಿಕ್ ಟನ್ ಮರಳು ದಾಸ್ತಾನು ಲಭ್ಯವಿದ್ದು, ಇಲ್ಲಿಯವರೆಗೆ 27,023 ಮೆ.ಟನ್ ಪ್ರಮಾಣದ ಮರಳು ಜಿಲ್ಲೆಯಲ್ಲಿನ ಕಾಮಗಾರಿಗಳಿಗೆ ಪೂರೈಕೆಯಾಗಿದ್ದು, ಇನ್ನೂ 75,444 ಮೆ.ಟನ್ ಪ್ರಮಾಣದ ಮರಳು ಸ್ಟಾಕ್‍ಯಾರ್ಡ್‍ಗಳಲ್ಲಿ ಲಭ್ಯವಿದೆ.

ಜಿಲ್ಲೆಯಲ್ಲಿ ನೆಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಮರಳು ಪೂರೈಕೆಯಾಗದೆ ಅಡಚಣೆ ಉಂಟಾಗಬಾರದೆಂಬ ಉದ್ದೇಶದಲ್ಲಿ ಮರಳು ಗುತ್ತಿಗೆದಾರರುಗಳಿಗೆ ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳಂತೆ 30 ದಿನಗಳ ಕಾಲಾವಕಾಶ ನೀಡಲಾಗಿದೆ.

ಜಿಲ್ಲೆಯಲ್ಲಿ 16 ಎಂ-ಸ್ಯಾಂಡ್ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಘಟಕಗಳಿಂದ ವಾರ್ಷಿಕವಾಗಿ 3,36,400 ಮೆ.ಟನ್ ಪ್ರಮಾಣದಷ್ಟು ಎಂ-ಸ್ಯಾಂಡ್ ಉತ್ಪಾದಿಸಬಹುದಾಗಿದೆ, 2023ರ ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ ಒಟ್ಟು 72,183 ಮೆ.ಟನ್ ಪ್ರಮಾಣದ ಎಂ-ಸ್ಯಾಂಡ್ ಜಿಲ್ಲೆಯಲ್ಲಿನ ಕಾಮಗಾರಿಗಳಿಗೆ ಪೂರೈಸಲಾಗಿರುತ್ತದೆ.

ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ತೆಗೆಯುವ ಸಂಬಂಧ 2011 ರ ಮಾರ್ಗಸೂಚಿಗಳನ್ನು ಪಾಲನೆ ಮಾಡದೆ ಮರಳು ತೆಗೆಯುವ ನೆಪದಲ್ಲಿ ವಾಣಿಜ್ಯ ಮರಳುಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹಸಿರು ಪೀಠದಲ್ಲಿ (ಓಉಖಿ)  ಮಂಗಳೂರು ಸುಲ್ತಾನ್ ಬತ್ತೇರಿ ನಿವಾಸಿ ಕಿರಣ್ ಕುಮಾರ್ ಹಾಗೂ ದ.ಕ. ನದಿ ಮೀನುಗಾರರ ಸಂಘದ ಪದಾಧಿಕಾರಿಗಳು ಮೀನುಗಾರರ ಸಮುದಾಯದ ಪರವಾಗಿ ಅರ್ಜಿ ಸಲ್ಲಿಸಿರುತ್ತಾರೆ.( ಮೂಲ ಅರ್ಜಿ ಸಂಖ್ಯೆ.219/2022). ಇದು ವಿಚಾರಣಾ ಹಂತದಲ್ಲಿದೆ.

ರಾಷ್ಟ್ರೀಯ ಹಸಿರು ಪೀಠ, ದಕ್ಷಿಣ ವಲಯ, ಚೆನ್ನೈ ಯಲ್ಲಿ ದಾಖಲಾಗಿರುವ ಮೂಲ ಅರ್ಜಿ ಸಂಖ್ಯೆ 252/2017(ಎಸ್‍ಝಡ್)ರಲ್ಲಿ ಮಾಡಿರುವ ದಿನಾಂಕ 18-05-2022 ರ ಆದೇಶದಲ್ಲಿ ‘’ಮರಳು ದಿಬ್ಬಗಳಲ್ಲಿ ತೆಗೆದ ಮರಳನ್ನು ನಿಯಮದಂತೆ ನದಿ ಪಾತ್ರದ ತಗ್ಗು ಪ್ರದೇಶಗಳಿಗೆ ಹಾಕಿ ಸಮತಟ್ಟು ಮಾಡುವಂತೆ ಮತ್ತು ಕಡಲತೀರ ಆರೈಕೆ ಹಾಗೂ ನದಿ ತೀರದ ಬಲರ್ವಧನೆಗೆ ಬಳಸುವಂತೆ’’ ನಿರ್ದೇಶನ ನೀಡಿದೆ.

ಕರಾವಳಿ ನಿಯಂತ್ರಣ ವಲಯದಲ್ಲಿ ವಾಡಿಕೆಯಂತೆ ಮೇ ತಿಂಗಳಲ್ಲಿ ಮರಳು ದಿಬ್ಬಗಳನ್ನು ಗುರುತಿಸುವ ಕಾರ್ಯ ಕೈಗೊಂಡು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಸೂಚನೆ ದಿನಾಂಕ 08-11-2011 ರಂತೆ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಹರಿಯುವ ನೇತ್ರಾವತಿ ಮತ್ತು ಫಲ್ಗುಣಿ ನದಿಗಳಲ್ಲಿ ಕ್ರಮವಾಗಿ 4 ಮತ್ತು 5 ಮರಳು ದಿಬ್ಬಗಳನ್ನು ಗುರುತಿಸಿದೆ. ಈ 9 ಮರಳು ದಿಬ್ಬಗಳಲ್ಲಿ 3,00,965 ಮೆ.ಟನ್ ಮರಳನ್ನು ತೆರವುಗೊಳಿಸುವ ಸಂಬಂಧ ಜಿಲ್ಲಾ ಕರಾವಳಿ ವಲಯ ನಿಯಂತ್ರಣ ಸಮಿತಿಯು ಕರಾವಳಿ ನಿಯಂತ್ರಣ ವಲಯ ನಿರಾಕ್ಷೇಪಣಾ ಪತ್ರ  ಪಡೆಯಲು ಕರ್ನಾಟಕ ರಾಜ್ಯ ಕರಾವಳಿ ನಿಯಂತ್ರಣ ವಲಯ ನಿರ್ವಹಣಾ ಪ್ರಾಧಿಕಾರಕ್ಕೆ ಅನುಮೋದನೆಗೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿರುತ್ತದೆ.

ನಾನ್ ಸಿಆರ್‍ಝಡ್ ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಮರಳು ಗುತ್ತಿಗೆದಾರರು ದಿನಾಂಕ 30-08-2023 ರಂದು ಸಲ್ಲಿಸಿರುವ ಮನವಿಯಲ್ಲಿ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿಗಳು 1994 ರ ನಿಯಮ 31-ವೈ ರಂತೆ ವಾರ್ಷಿಕ ಉಪ ಖನಿಜದ ಉತ್ಪಾದನೆಯ ಶೇಕಡ 50 ರಷ್ಟು ಖನಿಜ ಉತ್ಪಾದನೆ ಮಾಡಿ ಸಾಗಾಟ ಮಾಡುವಂತೆ ಕಡ್ಡಾಯವಿರುವ ನಿಯಮವನ್ನು ಸಡಿಲಗೊಳಿಸಬೇಕು ಮತ್ತು ಜಿಲ್ಲೆಯಲ್ಲಿ ಮರಳಿನ ಬೇಡಿಕೆ ಕಡಿಮೆಯಿರುವುದರಿಂದ ಅಂತರ್ ಜಿಲ್ಲಾ ಮರಳು ಸಾಗಾಟಕ್ಕೆ ಇರುವ ನಿರ್ಬಂಧವನ್ನು ತೆರವುಗೊಳಿಸಲು ಕೋರಿಕೊಂಡಿದ್ದಾರೆ. ಇದು ಜಿಲ್ಲೆಯಲ್ಲಿ ಮರಳು ಸಾಕಷ್ಟು ಲಭ್ಯವಿದ್ದು, ಮರಳು ಅಭಾವ ಇಲ್ಲದಿರುವುಕ್ಕೆ ಕೈಗನ್ನಡಿಯಾಗಿದೆ. ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

25 sand mining leases have been sanctioned in the non-CR Z area of ​​river basins in
South Kannada district, out of which 24 sand mining leases are in effect,
the Deputy Director of Mines and Earth Science Department said in a release.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts