ಸಿನಿಮಾ

ಚಿತ್ರೀಕರಣ ಪೂರ್ಣಗೊಳಿಸಿದ, ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

ಜಾಹೀರಾತು

ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದು ಪೂರ್ಣಗೊಂಡಿತು.

“ಕೃಷ್ಣ ಬೆಳ್ತಂಗಡಿ” ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದು ಇವರ ಮೂರನೇ ನಿರ್ದೇಶನದ ಸಿನಿಮಾವಾಗಿದೆ.ರವಿ ಆಚಾರ್ ಹಾಗೂ ಅರಸೀಕೆರೆ ಉಮೇಶ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ.ಉಳಿದಂತೆ, ಶಂಕರ್ ಭಟ್, ಪೂಜಾ, ಈಶ್ವರ್ ದಲ, ವಾಣಿ ಗೌಡ, ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಶಾಸಕರಾದ ಶಿವಲಿಂಗೇ ಗೌಡರು ಒಂದು ಪ್ರಧಾನ ಪಾತ್ರ ಮಾಡಿದ್ದಾರೆ.ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬೆಂಗಳೂರಿನಲ್ಲಿ ನಡೆಯುತ್ತಿದೆ ಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

Shree Jaenukal Production’s “Itu Nam Shale” children’s movie. First phase of shooting was completed in Araseikere Jaenukal and Geejihalli and in Bangalore. “Krishna Belthangadi” has written the story, screenplay, dialogue and directed this film, this is his third directorial film.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts