ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ ಕುರಿತು ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಜಾಹೀರಾತು

Chief Minister Siddaramaiah promised to discuss with the Minister of Kannada and Culture the request to get the status of Tulu language as an additional language in Karnataka.

ಅವರು ಇಂದು ಬೆಂಗಳೂರು ಕಂಬಳ ಸಮಿತಿ ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನ ದಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಜಾಹೀರಾತು

ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಕ್ರೀಡೆ ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಜನ ಬಂದು ನೋಡುವ , ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದರು.

ಜಾಹೀರಾತು

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದರು.

ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ. ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆ ಯಾಗುತ್ತದೆ ಎಂದು ಮುಖ್ಯಮಂತ್ರಿ ಗಳು ಅಭಿಪ್ರಾಯಪಟ್ಟರು.

ಜಾಹೀರಾತು

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು ಎಂದರು.ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು ,ಇದಕ್ಕೆ ಪ್ರಯತ್ನ ಮಾಡಲಾಗುವುದು ಎಂದರು.ಕಂಬಳ ಸಮಿತಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ASHOK KUMAR RAI KODIMBADY ಅಶೋಕ್ ಕುಮಾರ್ ರೈ, ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮೇಲ್ಮನೆ ಸದಸ್ಯ ಮಂಜುನಾಥ್ ಭಂಡಾರಿ, ಕಾರ್ಯಾಧ್ಯಕ್ಷ ಗುರುಕಿರಣ್, ರಂಜನ್ ಶೆಟ್ಟಿ, ರಾಜೇಂದ್ರ ಕುಮಾರ್, ಶಂಕುತಲಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ ಕುರಿತು ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*