ಮಂಗಳೂರು: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದು, ಒಟ್ಟು 1,62,80,000ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಲದ ಸದ್ಯ ವಿಟ್ಲದ ಮಂಗಿಲಪದವು ನಿವಾಸಿಯಾಗಿರುವ ಪ್ಯಾರೇಜಾನ್ (37), ವಿಟ್ಲ ಸಮೀಪದ ಪಾತಿರತೋಟ ನಿವಾಸಿ ಬದ್ರುದ್ದೀನ್ (28), ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ನಿವಾಸಿ ರಾಜೇಶ್ ಆರ್ (22) ಬಂಧಿತ ಆರೋಪಿಗಳು.
ಮಂಗಳೂರಿನ ಪಂಪ್ ವೆಲ್ ಬಳಿ ನಾಲ್ವರು ಸ್ವಿಪ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000 ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ವಿವರ ಹೀಗಿದೆ. 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್), ಸಿಲ್ವರ್ ಬಣ್ಣದ ಸ್ವಿಪ್ಟ್ ಹಾಗೂ ಮೊಬೈಲ್ ಫೋನ್ ಗಳು.
ಆರೋಪಿಗಳಲ್ಲಿ ಇಬ್ಬರು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಮಂಗಳಪದವು ನಿವಾಸಿಗಳಾಗಿದ್ದರೆ, ಮತ್ತೋರ್ವ ತಮಿಳುನಾಡಿನವನು. ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ಪಾಲ್ಗೋಂಡಿದ್ದರು.
In an important operation, Mangalore CCB police arrested three accused who were trying to sell whale vomit (amber grease) worth crores of rupees and assets worth Rs 1,62,80,000 were seized.
Be the first to comment on "ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕೋಟ್ಯಂತರ ರೂ ಬೆಲೆಬಾಳುವ ಅಂಬರ್ ಗ್ರೀಸ್ ಮಾರಾಟ ಪ್ರಕರಣ ಪತ್ತೆ"