ಕಂಬಳ ನೋಡಿ ಹಿಂದಿರುಗುತ್ತಿದ್ದ ಇಬ್ಬರು ದಕ್ಷಿಣ ಕನ್ನಡ ಜಿಲ್ಲೆಯವರು ಬೋರ್ ವೆಲ್ ಲಾರಿಯೊಂದು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕುಣಿಗಲ್ ಸಮೀಪ ನಡೆದಿದೆ.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ರಾಜ್ಯ ಹೆದ್ದಾರಿ 33ರಲ್ಲಿ ಘಟನೆ ನಡೆದಿದ್ದು, ಕೊತ್ತಗೆರೆ ಹೋಬಳಿ ಚಿಗಣಿಪಾಳ್ಯ ಗ್ರಾಮದ ಬಳಿ ಭಾನುವಾರ ಮುಂಜಾನೆ ಈ ಘಟನೆ ಸಂಭವಿಸಿದೆ.
ಮಂಗಳೂರು ಬಜಪೆ ಮೂಲದ ಕಿಶನ್ ಶೆಟ್ಟಿ (20) ದಕ್ಷಿಣ ಕನ್ನಡ ಜಿಲ್ಲೆ ಭಟ್ರತೋಟ ಗ್ರಾಮದ ಫಿಲಿಪ್ ನೇರಿ ಲೋಬೋ (32) ಸಾವನ್ನಪ್ಪಿದವರು.ನಿತೀಶ ಭಂಡಾರಿ, ಪ್ರೀತಿ ಲೋಬೊ, ಹರೀಶ್ ಎಂಬವರು ತೀವ್ರ ಗಾಯಗಳೊಂದಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.