ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ ಜೇಸಿ ಕಲರವ ಭಾನುವಾರ ಜರಗಿತು.ಮುಖ್ಯ ಅತಿಥಿಯಾಗಿದ್ದ ಶಾಲಾ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಶ್ರುತಿ ಕೆ. ಮಾತನಾಡಿ, ಪ್ರತಿಭಾ ಪ್ರದಶನಕ್ಕೆ ಪೂರಕವಾಗಿ ಇಂತಹ ಕಾರ್ಯಕ್ರಮಗಳು ಶಾಲೆಗಳಲ್ಲಿ ನಡೆಯುವುದು ಅಗತ್ಯ. ಪ್ರತಿಭೆಗಳಿಗೆ ವೇದಿಕೆ ದೊರೆತಾಗ ಪ್ರೋತ್ಸಾಹ ಸಿಕ್ಕಾಗ ಸಕಾರಾತ್ಮಕ ಬೆಳವಣಿಗೆ ಹೊಂದಲು ಸಾಧ್ಯ ಎಂದರು.
ಗೌರವ ಅತಿಥಿಯಾಗಿದ್ದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ನಿವೇದ್ಯಾ ಗಣೇಶ್ ಪ್ರತಿಭಾ ಪುರಸ್ಕಾರ ನೆರವೇರಿಸಿ ಶುಭಹಾರೈಸಿದರು.ಶಾಲಾ ವಿದ್ಯಾರ್ಥಿ ನಾಯಕಿ ಸೃಜನಾ ಎಸ್ ರೈ ಅಧ್ಯಕ್ಷತೆ ವಹಿಸಿದ್ದರು
ಹಲವು ವರ್ಷ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಪ್ರಸ್ತುತ ಸರಕಾರಿ ಶಾಲೆ ಶಿಕ್ಷಕಿಯಾಗಿ ಸೇರ್ಪಡೆಯಾದ ಗೀತಾ ಅವರನ್ನು ಸನ್ಮಾನಿಸಲಾಯಿತು. ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ವಿಟ್ಲ ವಲಯ ಮೇಲ್ವಿಚಾರಕಿ ವನಿತಾ ಅವರನ್ನು ಗೌರವಿಸಲಾಯಿತು.
ಜೇಸಿ ಆಂಗ್ಲ ಮಾದ್ಯಮ ಶಾಲೆ ಆಡಳಿತ ಮಂಡಳಿಯ ಅಧ್ಯಕ್ಷ ಎಲ್. ಎನ್. ಕೂಡೂರು,ಉಪಾಧ್ಯಕ್ಷ ಶ್ರೀಧರ ಶೆಟ್ಟಿ, ಕೋಶಾಧಿಕಾರಿ ಪ್ರಭಾಕರ ಶೆಟ್ಟಿ, ಜತೆ ಕಾರ್ಯದರ್ಶಿ ಶ್ರೀಪ್ರಕಾಶ ಕುಕ್ಕಿಲ, ನಿರ್ದೇಶಕರಾದ ಮೋನಪ್ಪ ಶೆಟ್ಟಿ, ಹಸನ್ ವಿಟ್ಲ, ಗೋಕುಲ್ ಶೇಟ್, ಪರಮೇಶ್ವರ ಹೆಗಡೆ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು, ಉಪಾಪ್ರಾಂಶುಪಾಲೆ ಜ್ಯೋತಿ ಶೆಣೈ ಉಪಸ್ಥಿತರಿದ್ದರು.ದಿಯಾ ಅವರು ಸ್ವಾಗತಿಸಿದರು.
ಪ್ರಾಂಶುಪಾಲ ಜಯರಾಮ ರೈ ವಾರ್ಷಿಕ ವರದಿ ಮಂಡಿಸಿದರು. ವಂದ್ಯಾ ಅವರು ವಂದಿಸಿದರು. ಮನೋನ್ಮಯಿ, ವೃದ್ಧಿ, ಕೇಶವ ಶ್ರವಣ, ಅನನ್ಯಾ ರೈ ರಕ್ಷಾ ,ಸಾತ್ವಿಕ್ ಚೈತನ್ಯಾ ಪ್ರತಿಭಾ ಪುರಸ್ಕೃತರ ಪಟ್ಟಿ ವಾಚಿಸಿದರು. ವಂದ್ಯಾ . ಅವನಿ ಜಿ ಶೆಟ್ಟಿ ಸಭಾ ಕಾರ್ಯಕ್ರಮ ನಿರ್ವಹಿಸಿದರು.ಮಕ್ಕಳಿಂದ ಸುದರ್ಶನ ವಿಜಯ ಯಕ್ಷಗಾನ ಪ್ರದರ್ಶನ ನಡೆಯಿತು. ಪೂರ್ವಾಹ್ನ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬಹುಮಾನ ನಡೆಯಿತು.ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಮೋಹನ ಎ ಕಾರ್ಯಕ್ರಮದ ಸಮಗ್ರ ವಂದನಾರ್ಪಣೆ ಮಾಡಿದರು.
Be the first to comment on "ವಿಟ್ಲ ಜೇಸಿ ಕಲರವ ಪ್ರತಿಭಾ ಪುರಸ್ಕಾರ, ಸನ್ಮಾನ"