ಪೂಪಾಡಿಕಲ್ಲು ನಾರಂಕೋಡಿ ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯ ಸುತ್ತಮುತ್ತ ಗಿಡಗಳು ಬೆಳೆದು ನಿಂತು ಶಾಲಾ ಮಕ್ಕಳು ನಡೆದುಕೊಂಡು ಹೋಗಲು ಭಯಡುತ್ತಿರುವುದನ್ನು ಗಮನಿಸಿ ಶೌರ್ಯ ವಿಪತ್ತು ತಂಡದ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು.
ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪೂಪಾಡಿ ಕಲ್ಲು – ನಾರಂಕೋಡಿ ರಸ್ತೆಯಲ್ಲಿ ಸಮಸ್ಯೆ ಕುರಿತು ಸ್ಥಳೀಯರ ಮನವಿಗೆ ಸ್ಪಂದಿಸಿದ ಕಲ್ಲಡ್ಕ ಶೌರ್ಯ ವಿಪತ್ತು ತಂಡ ಸದಸ್ಯರು, ರಸ್ತೆಯ ಎರಡು ಬದಿಯಲ್ಲಿ ಬೆಳೆದ ಗಿಡಗಳನ್ನು ಕಡಿದು ಸ್ವಚ್ಚತೆ ಮಾಡಿದರು. ಈ ರಸ್ತೆಯ ಒಂದು ಭಾಗವು ಬೋಳಂತೂರು ಗ್ರಾಮಕ್ಕೆ ಸೇರಿದ್ದು ಇನ್ನೊಂದು ಬದಿ ಗೋಳ್ತಮಜಲು ಗ್ರಾಮ ಪಂಚಾಯತಿಗೆ ಸೇರಿದೆ. ಈ ಸ್ವಚ್ಛತಾ ಕಾರ್ಯದಲ್ಲಿ ಯೋಜನೆ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ ಕೊಳಕೀರು,ಶೌರ್ಯ ವೀಪತು ತಂಡದ ಅಧ್ಯಕ್ಷ ಮಾಧವ ಸಾಲಿಯಾನ್ ಕುದುರೆಬೆಟ್ಟು, ತಂಡದ ಸಂಯೋಜಕ ವಿದ್ಯಾ, ಕಲ್ಲಡ್ಕ ಒಕ್ಕೂಟ ಸೇವಾ ಪ್ರತಿನಿಧಿ ಗಣೇಶ್, ಶೌರ್ಯ ತಂಡ ಸದಸ್ಯರುಗಳಾದ ವೆಂಕಪ್ಪ ಜಿ, ಮೌರೀಶ್, ರವಿಚಂದ್ರ ಜೋಗಿ,ರಮೇಶ್ ಕುದ್ರೆಬೆಟ್ಟು, ಸಂತೋಷ್ ಬೊಳ್ಪೋಡಿ,ಚಿನ್ನಾ ಕಲ್ಲಡ್ಕ,ಸತೀಶ್ ಮೇಸ್ತ್ರಿ,ಧನಂಜಯ ಕೊಳಕೀರು, ಸ್ಥಳೀಯರಾದ ಹಮೀದ್, ಚರಣ್ ಮೊದಲಾದವರು ಪಾಲ್ಗೊಂಡಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪೂಪಾಡಿಕಲ್ಲು ನಾರಂಕೋಡಿ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ"
Be the first to comment on "ಪೂಪಾಡಿಕಲ್ಲು ನಾರಂಕೋಡಿ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ"