ಬಂಟ್ವಾಳ: ಗೂಡಿನಬಳಿಯಲ್ಲಿರುವ ಬಿ.ಮೂಡ ಸರಕಾರಿ ಪದವಿಪೂರ್ವಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕದ ವತಿಯಿಂದ “ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ” ಎಂಬ ಕಾರ್ಯಕ್ರಮ ಬಂಟ್ವಾಳ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾಲೇಜಿನಲ್ಲಿ ನಡೆಯಿತು.
ಬಂಟ್ವಾಳ ಆರೋಗ್ಯ ಇಲಾಖೆ ವೈದ್ಯಾಧಿಕಾರಿ ಡಾ.ಪ್ರಕಾಶ್ ವಿದ್ಯಾರ್ಥಿಗಳಿಗೆ ರಕ್ತಹೀನತೆ ಬಗ್ಗೆ ಮಾಹಿತಿ ನೀಡಿದರು. ಬಳಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ದಾದಿಯರು ಕಾಲೇಜಿನ ವಿದ್ಯಾರ್ಥಿಗಳ ಆರೋಗ್ಯ ಮತ್ತು ರಕ್ತಹೀನತೆ ಪರೀಕ್ಷೆ ಮಾಡಿ ಸೂಕ್ತ ವೈದ್ಯಕೀಯ ಸಲಹೆ ನೀಡಿದರು. ರಕ್ತಹೀನತೆ ಇರುವ ವಿದ್ಯಾರ್ಥಿಗಳಿಗೆ ಸೂಕ್ತ ಮಾತ್ರೆಗಳನ್ನು ವಿತರಿಸಲಾಯಿತು. ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದು ಸಹಕರಿಸಿದರು. ಕಾಲೇಜಿನ ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಘಟಕದ ಸಂಚಾಲಕ ದಾಮೋದರ ಇ ಸ್ವಾಗತಿಸಿ, ವಂದಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಬಿ.ಮೂಡ ಪ.ಪೂ.ಕಾಲೇಜಿನಲ್ಲಿ ರಕ್ತಹೀನತೆಯ ಪರೀಕ್ಷೆ"