ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆ ಬಗ್ಗೆ ತರಬೇತಿ ನೀಡಲಾಯಿತು.
ವಿಟ್ಲದ ಸಮುದಾಯ ಆರೋಗ್ಯ ಭವನ, ಮಾಣಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನಗಳಲ್ಲಿ ನಡೆಸಲಾದ ತರಬೇತಿ ಕಾರ್ಯಕ್ರಮದಲ್ಲಿ ಒಟ್ಟು ನೂರಕ್ಕೂ ಹೆಚ್ಚು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ತರಬೇತಿ ಪಡೆದರು. ಈ ಕಾರ್ಯಕ್ರಮಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಹಿರಿಯ ಮೇಲ್ವಿಚಾರಕರಾದ ರೂಪಕಲಾ, ಸೋಮಕ್ಕ ಹಾಗೂ ಗುಣವತಿ ಉಪಸ್ಥಿತರಿದ್ದರು. ಬಿ ಸಿ ರೋಡಿನ ವಿಕಾಸಂ ಸೇವಾ ಫೌಂಡೇಶನ್ನಿನ ನಿರ್ದೇಶಕ ಗಣೇಶ್ ಭಟ್ ವಾರಣಾಸಿ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
Be the first to comment on "ಅಂಗನವಾಡಿ ಕಾರ್ಯಕರ್ತೆಯರಿಗೆ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ತರಬೇತಿ"