ಬಂಟ್ವಾಳ

ಅಂಗನವಾಡಿ ಕಾರ್ಯಕರ್ತೆಯರಿಗೆ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ತರಬೇತಿ

ಜಾಹೀರಾತು

ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆ ಬಗ್ಗೆ ತರಬೇತಿ ನೀಡಲಾಯಿತು.

ವಿಟ್ಲದ ಸಮುದಾಯ ಆರೋಗ್ಯ ಭವನ, ಮಾಣಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನಗಳಲ್ಲಿ ನಡೆಸಲಾದ ತರಬೇತಿ ಕಾರ್ಯಕ್ರಮದಲ್ಲಿ ಒಟ್ಟು ನೂರಕ್ಕೂ ಹೆಚ್ಚು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ತರಬೇತಿ ಪಡೆದರು. ಈ ಕಾರ್ಯಕ್ರಮಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಹಿರಿಯ ಮೇಲ್ವಿಚಾರಕರಾದ  ರೂಪಕಲಾ, ಸೋಮಕ್ಕ ಹಾಗೂ ಗುಣವತಿ ಉಪಸ್ಥಿತರಿದ್ದರು. ಬಿ ಸಿ ರೋಡಿನ ವಿಕಾಸಂ ಸೇವಾ ಫೌಂಡೇಶನ್ನಿನ ನಿರ್ದೇಶಕ ಗಣೇಶ್ ಭಟ್ ವಾರಣಾಸಿ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ