ಬಂಟ್ವಾಳ

ಚಿಕ್ಕಮಗಳೂರಿನ ಘಟನೆ: ಬಂಟ್ವಾಳದಲ್ಲಿ ವಕೀಲರ ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ ಯುವ ವಕೀಲರಾದ ಪ್ರೀತಮ್ ಎಂ ಟಿ ಅವರಿಗೆ ಪೊಲೀಸ್ ದೌರ್ಜನ್ಯವಾಗಿದೆ ಎಂದು ಆರೋಪಿಸಿ, ಬಂಟ್ವಾಳದ ವಕೀಲರ ಸಂಘದ ವತಿಯಿಂದ ಸೋಮವಾರ  ಜೆ ಎಂ ಎಫ್ ಸಿ ನ್ಯಾಯಾಲಯ ಎದುರು ಪ್ರತಿಭಟನೆ ನಡೆಯಿತು. ಬಳಿಕ ಬಂಟ್ವಾಳ ತಹಸೀಲ್ದಾರ್ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು. ಆರೋಪಿ ಪೋಲೀಸರನ್ನು ತಕ್ಷಣ ಬಂಧಿಸಬೇಕು ಮತ್ತು ಅವರ ವಿರುದ್ದ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣ ಸರಕಾರ ವಕೀಲರ ರಕ್ಷಣಾ ಕಾಯಿದೆ ಜಾರಿಗೊಳಿಸಬೇಕು ಎಂದು ಈ ಸಂದರ್ಭ ಪ್ರತಿಭಟನಾಕಾರರು ಒತ್ತಾಯಿಸಿದರು.

ಜಾಹೀರಾತು

ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಕುಮಾರ್ ವೈ ಮಾತನಾಡಿ, ದೌರ್ಜನ್ಯ ಕಾನೂನುಬಾಹಿರವಾಗಿದ್ದು, ಆರೋಪಿಗಳ ವಿರುದ್ದ ಎಫ.ಐ.ಆರ್. ದಾಖಲೆ ಆದರೂ ಈ ವರೆಗೂ ಬಂದಿಸದೆ ಇರುವ ವಿಳಂಬ ದೋರಣೆ ಸರಿಯಲ್ಲ ಎಂದರು.

ಜಾಹೀರಾತು

ವಕೀಲರಾದ ಮೋಹನ್ ಕಡೇಶಿವಾಲ್ಯ ಮಾತನಾಡಿ ನಿರಂತರವಾಗಿ ಯುವ ವಕೀಲರ ಮೇಲಿನ ದೌರ್ಜನ್ಯ ಖoಡನೀಯ . ನ್ಯಾಯಾಲಯ ಈ ಬಗ್ಗೆ ತಕ್ಷಣ ಮದ್ಯಪ್ರವೇಶಬೇಕು ಎಂದು ಒತ್ತಾಯಿಸಿದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ ಮಾತನಾಡಿ, ಹಲ್ಲೆಗೊಳಗಾದ ವಕೀಲರ ಬೆಂಬಲವಾಗಿ ವಕೀಲರ ಸಂಘ ಬಂಟ್ವಾಳ ಸದಾ ಜೊತೆಗಿರುತ್ತದೆ ಎಂಬ ಭರವಸೆ ನೀಡಿದರು. ಬಂಟ್ವಾಳ ವಕೀಲರ ಸಂಘದ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು,

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts