ಜಿಲ್ಲಾ ಸುದ್ದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೋಹನ್ ಕುಮಾರ್ ಮತ್ತು ಕೆಂಪರಾಜ್ ಬಂಧಿತರು.

ಜಾಹೀರಾತು

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖೋಟಾ ನೋಟ ಪ್ರಕರಣದಲ್ಲಿ, ನ್ಯಾಯಾಲಯಕ್ಕೆ ಹಾಜರಾಗದೇ ಆಸ್ತಿ ಜಪ್ತಿ ವಾರಂಟ್ ಹೊರಡಿಸಿದರು ಸಿಗದೇ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಕರಣದ ಆರೋಪಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ದೇವಾಂಗ ಬೀದಿ ಮನೆ ಮೋಹನ್ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಲಿ ಬಸ್ಸು ತಂಗುದಾಣದ ಬಳಿಯಿಂದ, ಹಾಗೂ ಸುಮಾರು 4 ವರ್ಷ ದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ, ಜೋಗಿಹಳ್ಳಿ ಗೇಟ್ ಮನೆ ನಿವಾಸಿ ಕೆಂಪರಾಜ್ ಎಂಬಾತನನ್ನು  ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ( ಅಪರಾಧ) ಪಿ.ಎಸ್.ಐ. ಸಮರ್ಥ ಆರ್.ಗಾಣಿಗೇರ್,  ಎಚ್.ಸಿ. ರಾಜೇಶ್, ಪಿ.ಸಿ. ವಿನಯ ಕುಮಾರ್ ರವರ ತಂಡ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ದಿನಾಂಕ ಡಿ.21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts