ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಚಿಣ್ಣರೋತ್ಸವ ಭಾನುವಾರ ರಾತ್ರಿ ನಡೆಯಿತು. ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೇ ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಎಲ್ ಕೆ ಜಿ ವಿದ್ಯಾರ್ಥಿಗಳ ಸಂಗೀತ ಪ್ರದರ್ಶನದೊಂದಿಗೆ ದಡ್ಡಲಕಾಡು ಚಿಣ್ಣರೋತ್ಸವ ಆರಂಭಗೊಂಡು ನೃತ್ಯ, ನಾಟಕ, ಕರಾಟೆ, ಬೆಂಕಿ ಸಾಹಸ, ಸಹಿತ ವಿವಿಧ ಸಾಮೂಹಿಕ ಚಿತ್ತಾರಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್, ವಿಧಾನಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ, ಕಿಯೋನಿಕ್ಸ್ ನಿಕಟಪೂರ್ವಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಚಿಣ್ಣರೋತ್ಸವ ವೀಕ್ಷಿಸಿದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)