ತುಳು ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ ಬೆಳೆಸೋಣ ಎಂದು ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಹೇಳಿದ್ದಾರೆ.
ಮೊಗರ್ನಾಡಿನಲ್ಲಿ ಬಂಟ್ವಾಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ), ತಾಲೂಕು ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ವತಿಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಶಂಭೂರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಊರಿಗೆ ಉತ್ತಮ ನೆರವು ದೊರಕುತ್ತಿದೆ ಎಂದರು.
ಜನಜಾಗೃತಿ ವೇದಿಕೆ ಬಂಟ್ವಾಳದ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಕಾರಂತ್ ನರಿಕೊಂಬು ಭಜನ ಸಂಕೀರ್ತನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಯೋಜನಾಧಿಕಾರಿ ಸುಧಾ ಜೋಶಿ, ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ, ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಮಾರುತಿನಗರ ಅಧ್ಯಕ್ಷರಾದ ಚಂದ್ರಸ್ ಕೋಡಿಮಜಲು, ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ಅಧ್ಯಕ್ಷ ಲೀಡಿಯ ಪಿಂಟೋ, ನರಿಕೊಂಬು ಎ, ಬಿ ಒಕ್ಕೂಟಗಳ ಅಧ್ಯಕ್ಷರಾದ ಕೃಷ್ಣಪ್ಪ ಸಪಲ್ಯ, ಜಯಂತ, ಮೊದಲಾದವರು ಉಪಸ್ಥಿತರಿದ್ದರು , ಸಭಾ ಕಾರ್ಯಕ್ರಮದ ಬಳಿಕ ಭಜನಾ ಶಿಕ್ಷಕ ಗಣೇಶ್ ನೇತೃತ್ವದಲ್ಲಿ ಕುಣಿತ ಭಜನಾ ತಂಡಗಳಾದ ಶ್ರೀ ರಾಮಾಂಜನೇಯ ಭಜನಾ ಮಂಡಳಿ ಶಂಭೂರು, ಓಂ ಶ್ರೀ ಭಜನಾ ಮಂಡಳಿ ನಾಯಿಲ, ಶ್ರೀ ವಿನಾಯಕ ಭಜನಾ ಮಂಡಳಿ ದೋಟ. ಕೆದ್ದೇಲ್, ತಂಡಗಳಿಂದ ಭಜನಾ ಸಂಕೀರ್ತನ ಕಾರ್ಯಕ್ರಮ ನೆರವೇರಿತು, ಸೇವಾ ಪ್ರತಿನಿಧಿಗಳಾದ ಅಮಿತಾ, ವನಿತಾ, ಅನಿತಾ,ಮಲ್ಲಿಕಾ, ಬಬಿತಾ ಪ್ರಾರ್ಥಿಸಿ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಸಾಗತಿಸಿದರು. ಸೇವಾ ಪ್ರತಿನಿಧಿ ಕುಸುಮಾವತಿ ವಂದಿಸಿದರು. ಸಂದೀಪ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರತಿಭಾ ವಸಂತ್ ಸಹಕರಿಸಿದರು