ವಿಟ್ಲ

ಹಿರಿಯ ಸಾಹಿತಿ ,ನಿವೃತ್ತ ಶಿಕ್ಷಕ ವಿ. ಮ. ಭಟ್ ಅಡ್ಯನಡ್ಕ ನಿಧನ

ಸಾಹಿತ್ಯ ವಲಯದಲ್ಲಿ ವಿ. ಮ.ಭಟ್ಟ ಅಡ್ಯನಡ್ಕ ಎಂದೇ ಗುರುತಿಸಲ್ಪಡುತ್ತಿದ್ದ ಹಿರಿಯ ಸಾಹಿತಿ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ಟ (87)ಅವರು ವಯೋ ಸಹಜ ಅನಾರೋಗ್ಯದಿಂದ ಡಿ. 15ರಂದು ರಾತ್ರಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಧೀರ್ಘ ಅವಧಿಗೆ ಶಿಕ್ಷಕರಾಗಿ ನಿವೃತ್ತರಾಗಿದ್ದರು.ಮಕ್ಕಳ ಸಾಹಿತಿಯಾಗಿ ಗುರುತಿಸಿಕೊಂಡಿದ್ದ ಅವರು ಕನ್ನಡದ ತುಳು ನಾಟಕಕಾರ, ನಿರ್ದೇಶಕನಾಗಿಯೂ ಪ್ರಸಿದ್ಧ ರಾಗಿದ್ದರು.ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಹಿರಿಯ ಸದಸ್ಯರಾಗಿದ್ದರು.

.ಉತ್ತಮ ಕ್ರೃಷಿಕರಾಗಿದ್ದು, ಅಡಿಕೆ ಪತ್ರಿಕೆಯ ಸಂಪಾದಕ ಮಂಡಳಿಯ ಸದಸ್ಯರೂ ಆಗಿದ್ದ ಅವರು ಸ್ಥಳೀಯ ಹತ್ತು ಹಲವು ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿದ್ದರು.ಸಾಹಿತ್ಯ ಸಮ್ಮೇಳನಗಳ ಮತ್ತು ಸಾಹಿತ್ಯ ಕಾರ್ಯಕ್ರಮಗಳ ಕವಿಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ‌ ಸಾವಿರಾರು ಕವಿಗೋಷ್ಠಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉದಯೋನ್ಮುಖ ಕವಿಗಳನ್ನು ಹುರಿದುಂಬಿಸುತ್ತಿದ್ದರು.ಹತ್ತಾರು ಕೃತಿಗಳನ್ನು ಪ್ರಕಟಿಸಿರುವ ಅವರ ರಚನೆಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮಂಗಳೂರು ಆಕಾಶವಾಣಿಯಲ್ಲಿ ‌ಅವರ ಕಾರ್ಯಕ್ರಮಗಳು ಪ್ರಸಾರ ಆಗಿವೆ.
ಅವರ ನಿಧನಕ್ಕೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಕಸಾಪ‌ಮಾಜಿ ರಾಜ್ಯಾದ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ದ. ಕ. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಸಾಹಿತಿಗಳಾದ ವಿ. ಬಿ. ಅರ್ತಿಕಜೆ, ಮುಳಿಯ ಶಂಕರ ಭಟ್, ಅಡ್ಯನಡ್ಕ ಶಿಕ್ಷಣ ಸಂಸ್ಥೆಗಳ ಡಾ. ಅಶ್ವಿನಿ ಕೃಷ್ಣಮೂರ್ತಿ ವಾರಣಾಸಿ, ಶಂಕರ ಸಾರಡ್ಕ ಮೊದಲಾದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts