ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ನೆರವಿನೊಂದಿಗೆ ಬಿಸಿಯೂಟ ಸೇವನೆ ಉಪಾಹಾರಗೃಹ ಉದ್ಘಾಟನೆ ನಡೆದಿದ್ದು, ಈ ಸಂದರ್ಭ ಮಾತನಾಡಿದ ಕೋಸ್ಟಲ್ ಬುಲೆಟಿನ್ ಸುದ್ದಿ ಮಾಧ್ಯಮ ಪ್ರವರ್ತಕ ಸಂತೋಷ್ ಕುಲಾಲ್ ನೆತ್ತರಕೆರೆ, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ರೂಡಿಸಿಕೊಂಡಲ್ಲಿ ಯಶಸ್ಸಿನ ಗುರಿ ತಲುಪಲು ಸಾಧ್ಯ, ಬಾಲ್ಯದಲ್ಲಿಯೇ ಸದ್ವಿಚಾರ ಹಾಗೂ ಸದ್ಗುಣಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿ ಎಂದರು.
ಅಧ್ಯಕ್ಷತೆಯನ್ನುಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಸಲಾಂ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಾಲೆಯಲ್ಲಿ ಸಿಗುವ ಸೌಲಭ್ಯ ಹಾಗೂ ಅವಕಾಶಗಳನ್ನು ಸದ್ಭಳಕೆ ಮಾಡಿ ಉತ್ತಮ ವಿದ್ಯಾರ್ಥಿಗಳಾಗಿ ಶಾಲೆಗೆ ಹಾಗೂ ಸಮಾಜಕ್ಕೆ ಹೆಸರು ತರಬೇಕು ಎಂದು ಹೇಳಿ, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀನಿವಾಸ ಕೆದಿಲ, ಶಾಲಾ ಆಡಳಿತ ಮಂಡಳಿ ಹಾಗೂ ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಕೆ ಎನ್ ಗಂಗಾಧರ ಆಳ್ವ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು, ತುಂಬೆ ವಿದ್ಯಾಸಂಸ್ಥೆಗಳ ಮ್ಯಾನೇಜರ್ ಅಬ್ದುಲ್ ಕಬೀರ್ ಬಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ.ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಹಾಗೂ ಅಶೋಕ್ ಸಹಕರಿಸಿದರು.