ಫರಂಗಿಪೇಟೆ

ಬಾಲ್ಯದಲ್ಲೇ ಸದ್ವಿಚಾರ, ಸದ್ಗುಣ ಬೆಳೆಸಿದರೆ, ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯ: ಸಂತೋಷ್ ಕುಲಾಲ್ ನೆತ್ತರಕೆರೆ

ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ನೆರವಿನೊಂದಿಗೆ ಬಿಸಿಯೂಟ ಸೇವನೆ ಉಪಾಹಾರಗೃಹ ಉದ್ಘಾಟನೆ ನಡೆದಿದ್ದು, ಈ ಸಂದರ್ಭ ಮಾತನಾಡಿದ  ಕೋಸ್ಟಲ್ ಬುಲೆಟಿನ್ ಸುದ್ದಿ ಮಾಧ್ಯಮ ಪ್ರವರ್ತಕ ಸಂತೋಷ್ ಕುಲಾಲ್ ನೆತ್ತರಕೆರೆ, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ರೂಡಿಸಿಕೊಂಡಲ್ಲಿ ಯಶಸ್ಸಿನ ಗುರಿ ತಲುಪಲು ಸಾಧ್ಯ, ಬಾಲ್ಯದಲ್ಲಿಯೇ ಸದ್ವಿಚಾರ ಹಾಗೂ ಸದ್ಗುಣಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿ ಎಂದರು.

ಜಾಹೀರಾತು

ಅಧ್ಯಕ್ಷತೆಯನ್ನುಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಸಲಾಂ  ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಾಲೆಯಲ್ಲಿ ಸಿಗುವ ಸೌಲಭ್ಯ ಹಾಗೂ ಅವಕಾಶಗಳನ್ನು ಸದ್ಭಳಕೆ ಮಾಡಿ ಉತ್ತಮ ವಿದ್ಯಾರ್ಥಿಗಳಾಗಿ ಶಾಲೆಗೆ ಹಾಗೂ ಸಮಾಜಕ್ಕೆ ಹೆಸರು ತರಬೇಕು ಎಂದು ಹೇಳಿ, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀನಿವಾಸ ಕೆದಿಲ, ಶಾಲಾ ಆಡಳಿತ ಮಂಡಳಿ ಹಾಗೂ ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ಕೆ ಎನ್ ಗಂಗಾಧರ ಆಳ್ವ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು, ತುಂಬೆ ವಿದ್ಯಾಸಂಸ್ಥೆಗಳ ಮ್ಯಾನೇಜರ್ ಅಬ್ದುಲ್ ಕಬೀರ್ ಬಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ.ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಹಾಗೂ ಅಶೋಕ್ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ