ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಬೊಂಡಾಲ ಹೈಸ್ಕೂಲಿನಲ್ಲಿ ಜ್ಞಾನವಿಕಾಸ ಯೋಜನೆಯಡಿ ಮಕ್ಕಳಿಗೆ ಉಚಿತ ತರಬೇತಿ ಕಾರ್ಯಕ್ರಮ ಬೊಂಡಾಲದ ಶಂಭೂರು ಸರಕಾರಿ ಹೈಸ್ಕೂಲಿನ ಸಭಾಂಗಣದಲ್ಲಿ ಆರಂಭಗೊಂಡಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ಬಂಟ್ವಾಳ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಮಕ್ಕಳಿಗೆ ಪಾಠಗಳ ತರಬೇತಿಯ ಕಾರ್ಯಕ್ರಮದನ್ವಯ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಭೂರಿನ ಪ್ರಗತಿಬಂದು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಪ್ಪ ನಾಯಕ ವಹಿಸಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಕಾರ್ಯಕ್ರಮದ ಬಗ್ಗೆ ಹಾಗೂ ಯೋಜನೆಯಲ್ಲಿ ಶಿಕ್ಷಣಕ್ಕೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಜನಜಾಗೃತಿ ವೇದಿಕೆ ಸದಸ್ಯರಾದ ಪುರುಷೋತ್ತಮ ನಾಟಿ, ಅತಿಥಿ ಶಿಕ್ಷಕರಾದ ಹರ್ಷ ಹಾಗೂ ಪ್ರಿಯ, ಜ್ಞಾನವಿಕಾಸ ಸಮನ್ವಯಾಧಿಕಾರಿ ಕಮಲಾಕ್ಷಿ ಉಪಸಿತರಿದ್ದರು. ಮೂರು ತಿಂಗಳು ಟ್ಯೂಷನ್ ಕ್ಲಾಸ್ ನಡೆಯಲಿದ್ದು ಸುಮಾರು 45 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಶಾಲಾ ವಿದ್ಯಾರ್ಥಿ ತಕ್ಷಿತ್ ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ ಲಕ್ಷ್ಮಿ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಕಮಲಾಕ್ಷ ಕಲ್ಲಡ್ಕ ವಂದಿಸಿದರು. ವಲಯ ಮೇಲ್ವಿಚಾರಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು
Be the first to comment on "ಬೊಂಡಾಲ ಹೈಸ್ಕೂಲಿನಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಮಕ್ಕಳಿಗೆ ಉಚಿತ ತರಬೇತಿ"