ಸ್ವಚ್ಚತೆ ಹಾಗೂ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಮೂಡಿಸುವ ಕಸ ಪ್ರಸಂಗ ವಿಶೇಷ ಜಾಗೃತಿ ಕಾರ್ಯಕ್ರಮ ಮಂಗಳವಾರ ಬಂಟ್ವಾಳ ಪುರಸಭೆಯ ಸಭಾಂಗಣದಲ್ಲಿ ನಡೆಯಿತು. ಹಸಿರುದಳ ಸಂಯೋಜಕ ನಾಗರಾಜ್ ಬಜಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌರಕಾರ್ಮಿಕರಿಗೆ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಹಾಗೂ ಅವರ ಜವಾಬ್ದಾರಿಯ ಬಗ್ಗೆ ತಿಳಿಸಿಕೊಟ್ಟರು.
ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಸಂದೀಪ್ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಿರಿಯ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಸಮುದಾಯ ಸಂಘಟಕಿ ಉಮಾವತಿ, ಪುರಸಭೆಯ ಸಿಬ್ಬಂದಿ, ಪೌರಕಾರ್ಮಿಕರು ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಪುರಸಭೆಯಲ್ಲಿ ಕಸ ಪ್ರಸಂಗ ವಿಶೇಷ ಜಾಗೃತಿ ಕಾರ್ಯಕ್ರಮ"