ಮಂಗಳೂರು: ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ದಿನಾಂಕ 13 ರಂದು ಶನಿವಾರ ಬೋಳೂರಿನ ಅಮೃತ ವಿದ್ಯಾಲಯಂ ಆವರಣದಲ್ಲಿ ಮಠದ 25 ನೇ ವರ್ಷದ ನೆನಪಿಗೆ ಹಾಗೂ ರಾಷ್ಟ್ರೀಯ ಯುವದಿನದ ಅಂಗವಾಗಿ ಒಂದು ದಿನದ ಯುವ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು ದ. ಕ. ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಮತ್ತು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಪ್ರೊ. ಎಂ. ಬಿ. ಪುರಾಣಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕವಿ – ಸಾಹಿತಿ ಡಾ. ವಸಂತಕುಮಾರ ಪೆರ್ಲ ಅಧ್ಯಕ್ಷತೆ ವಹಿಸಲಿದ್ದಾರೆ.
ದ. ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಆಹ್ವಾನಿತ ಯುವ ಕವಿ ಲೇಖಕರು ಭಾಗವಹಿಸಲಿದ್ದು ಕವಿಗೋಷ್ಠಿ, ಕಥಾ ಗೋಷ್ಠಿ ಮತ್ತು ಪ್ರಬಂಧ ಗೋಷ್ಠಿಗಳನ್ನು ಆಯೋಜಿಸಲಾಗಿದೆ. ವೀಣಾ ಟಿ. ಶೆಟ್ಟಿ, ಡಾ. ಬಾಲಕೃಷ್ಣ ಭಾರದ್ವಾಜ್ ಮತ್ತು ಪ್ರವೀಣ್ ಚಂದ್ರ ಶರ್ಮ ಗೋಷ್ಠಿಗಳ ಅಧ್ಯಕ್ಷತೆ ವಹಿಸಲಿದ್ದಾರೆ.
ಅಪರಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಜರಗಲಿದ್ದು ಕರಾವಳಿ ವಾಚಕಿಯರ ಲೇಖಕಿಯರ ಸಂಘದ ಅಧ್ಯಕ್ಷೆ ಜ್ಯೋತಿ ಚೇಳ್ಯಾರು ಸಮಾರೋಪ ಭಾಷಣ ಮಾಡುವರು. ಸ್ವಾಮಿನಿ ಮಂಗಳಾಮೃತ ಪ್ರಾಣ, ಡಾ. ಜೀವರಾಜ ಸೊರಕೆ, ಡಾ. ಬಾಲಕೃಷ್ಣ ಭಾರದ್ವಾಜ್, ವೀಣಾ ಟಿ. ಶೆಟ್ಟಿ ಮತ್ತು ಪ್ರವೀಣ್ ಚಂದ್ರ ಶರ್ಮ ಉಪಸ್ಥಿತರಿರುವರು. ಡಾ. ವಸಂತಕುಮಾರ ಪೆರ್ಲ ಅಧ್ಯಕ್ಷತೆ ವಹಿಸುವರು.