ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಪ್ರಯಾಣಿಕ ಮಹಿಳೆ ಹೊರಕ್ಕೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಹೊರವಲಯದ ಜೋಕಟ್ಟೆ ಕ್ರಾಸ್ ಬಳಿ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು 65 ವರ್ಷದ ಈರಮ್ಮ ಎಂದು ಗುರುತಿಸಲಾಗಿದೆ.
ಅವರು ತನ್ನ ಮಗಳೊಂದಿಗೆ ಖಾಸಗಿ ಬಸ್ಸಿನಲ್ಲಿ ಸುರತ್ಕಲ್ ಕಡೆಗೆ ಪ್ರಯಾಣಿಸುತ್ತಿದ್ದರು. ಸೋಮವಾರ ಬೆಳಗ್ಗೆ 10:10 ರ ಸುಮಾರಿಗೆ ಬಸ್ಸು ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್ ತಲುಪಿದಾಗ, ಅದರ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ. ಈ ಪರಿಣಾಮ ಚಾಲಕನ ಪಕ್ಕದ ಮುಂದಿನ ಸೀಟಿನಲ್ಲಿ ಕುಳಿತಿದ್ದ ಈರಮ್ಮ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ. ಅಲ್ಲದೆ, ಬಸ್ ನ ಹಿಂಭಾಗದ ಎಡ ಚಕ್ರವು ಈರಮ್ಮ ಅವರ ಮೇಲೆ ಚಲಿಸಿದ ಪರಿಣಾಮವಾಗಿ ತಲೆಗೆ ಗಂಭೀರ ಗಾಯವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಬಾಗಿಲು ಇರಲಿಲ್ಲ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಸ್ ಚಾಲಕ ನಿಂದ ಹಠಾತ್ ಬ್ರೇಕ್: ಮುಂದಿನ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಹೊರಕ್ಕೆಸೆಯಲ್ಪಟ್ಟು ಚಕ್ರದಡಿ ಬಿದ್ದು ಸಾವು"
Be the first to comment on "ಬಸ್ ಚಾಲಕ ನಿಂದ ಹಠಾತ್ ಬ್ರೇಕ್: ಮುಂದಿನ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಹೊರಕ್ಕೆಸೆಯಲ್ಪಟ್ಟು ಚಕ್ರದಡಿ ಬಿದ್ದು ಸಾವು"