ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ವಾರ್ಷಿಕ ಮಹಾಸಭೆ, ವಿಶ್ರಾಂತ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಹಾಗೂ ಸರಕಾರಿ ನೌಕರರಿಗೆ ವ್ಯಕ್ತಿತ್ವವಿಕಸನ ಕಾರ್ಯಕ್ರಮವನ್ನು ಬಿ.ಸಿ.ರೋಡಿನಲ್ಲಿರುವ ಸರಕಾರಿ ನೌಕರರ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿತ್ತು.
ಈ ಸಂದರ್ಭ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ ಹಳೆ ಪಿಂಚಣಿ ಜಾರಿ ಸರಕಾರಿ ನೌಕರರ ಮಹತ್ವದ ಬೇಡಿಕೆಗಳಲ್ಲೊಂದಾಗಿದ್ದು, ಇದನ್ನು ಪ್ರಣಾಳಿಕೆಯಲ್ಲೂ ಸೇರಿಸಲಾಗಿದೆ. ತನ್ನ ಪಕ್ಷ ಇಂದು ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಇದುವರೆಗೂ ಘೋಷಿತ ಭರವಸೆಗಳನ್ನೆಲ್ಲಾ ಈಡೇರಿಸಲಾಗಿದೆ. ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದಂತೆ ಹಳೆ ಪಿಂಚಣಿ ಜಾರಿಯನ್ನು ಸರಕಾರ ಮಾಡಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಹಳೆಯ ಪಿಂಚಣಿ ನೀತಿ ಜಾರಿಗೆ ಯಾವುದೇ ಆರ್ಥಿಕ ಸಮಸ್ಯೆ ಇದ್ದರೂ ಸರಕಾರ ಅದನ್ನು ಜಾರಿ ಮಾಡುವ ವಿಶ್ವಾಸ ಇದೆ ಎಂದ ಅವರು, ಯಾವುದೇ ಸರಕಾರ ಇದ್ದರೂ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸುವ ಜವಾಬ್ದಾರಿ ಇದೆ. ಯಾರು ಹೆಚ್ಚು ಭರವಸೆ ಈಡೇಸುತ್ತಾರೆ ಎಂಬುದನ್ನು ನೋಡಿಕೊಳ್ಳುವ ಜವಾಬ್ದಾರಿ ಬುದ್ಧವಂತ ನಾಗರಿಕರದ್ದು ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಮಾತನಾಡಿ, ಸರಕಾರಿ ನೌಕರರ ನಾನಾ ಬೇಡಿಕೆಗಳನ್ನು ಸರಕಾರ ಈಡೇರಿಸುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪುಷ್ಪಲತಾ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಎಇಇ ತಾರಾನಾಥ ಸಾಲ್ಯಾನ್, ಪಿಂಚಣಿದಾರರ ಸಂಘದ ಕಾರ್ಯದರ್ಶಿ ನೀಲೋಜಿರಾವ್, ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ನಾಯಕ್ ರಾಯಿ, ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ವಿವಿಧ ಸಂಘಟನೆಗಳ ಅಧ್ಯಕ್ಷ, ಪದಾಧಿಕಾರಿಗಳಾಧ ಜೋಯೆಲ್ ಲೋಬೊ, ಶಮಂತ ಕುಮಾರ್., ಮಂಜುನಾಥ, ಬಸಯ್ಯ ಆಲಿಮಟ್ಟಿ ಇಂದುಶೇಕರ್, ಶಿವಪ್ರಸಾದ್ ಶೆಟ್ಟಿ, ನವೀನ ಪಿಎಸ್ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ಶಿಕ್ಷಕ ವಿಠಲ ನಾಯಕ್ ಕಲ್ಲಡ್ಕ ಅವರು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಸಿಕೊಟ್ಟರು.
Be the first to comment on "ಹಳೆ ಪಿಂಚಣಿ (OPS) ಜಾರಿಗೆ ಸರಕಾರ ಬದ್ಧ: ಸರಕಾರಿ ನೌಕರರ ಸಮಾರಂಭದಲ್ಲಿ ಮಾಜಿ ಸಚಿವ ರೈ"