ಬಂಟ್ವಾಳ

ಹೊರಗಿನ ಜಗತ್ತಷ್ಟೇ ಅಲ್ಲ, ಸೋಶಿಯಲ್ ಮೀಡಿಯಾ ಪೋಸ್ಟ್ ಮೇಲೆಯೂ ಗಸ್ತು – ಪ್ರಕಟಣೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಸೂಚನೆ

ದಿನಾಂಕ 22.01.2024 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟಣೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ, ಈಗಾಗಲೇ ಕೆ.ಎಸ್.ಆರ್.ಪಿ ಪಡೆ ಹಾಗೂ ಡಿ.ಎ.ಆರ್ ಪಡೆಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ ಹಾಗೂ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ, ಆಯಾ ಠಾಣಾ ಪೊಲೀಸರಿಂದ ಹಗಲು ಗಸ್ತು ಹಾಗೂ ರಾತ್ರಿ ಗಸ್ತನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

ಜಾಹೀರಾತು

ಇದರೊಂದಿಗೆ ಈ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಮೇಲೆಯೂ ನಿರಂತರವಾಗಿ ನಿಗಾವಹಿಸಲಾಗುತ್ತಿದೆ. ಸೂಕ್ತ ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ರೀತಿಯ ಅಕ್ಷೇಪಾರ್ಹ ಬರಹ ಅಥವಾ ಬಿತ್ತಿಚಿತ್ರಗಳು ಪ್ರದರ್ಶಿಸುವುದು ಅಥವಾ ಅವುಗಳನ್ನು ಅಳವಡಿಸಿದಲ್ಲಿ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು. ತುರ್ತು ಸಂಪರ್ಕಕ್ಕಾಗಿ: ದ.ಕ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 0824 2220500 ಅಥವಾ 112 ಸಹಾಯವಾಣಿಗೆ ಕರೆ ಮಾಡಲು ವಿನಂತಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts