ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ ಟ್ರಸ್ಟ್ ವತಿಯಿಂದ ಬಿ.ಸಿ.ರೋಡ್ ನ ಪೊಲೀಸ್ ಲೇನ್ ನಲ್ಲಿರುವ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಮತ್ತು ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಅವರು ಫೆ.16ರಿಂದ 23ರವರೆಗೆ ನಡೆಯಲಿರುವ ಕಾರ್ಯಕ್ರಮದ ಮಾಹಿತಿಗಳು ಇರುವ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ದೇವಸ್ಥಾನದ ಕೆಲಸ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಮೂರು ಕೋಟಿ ರೂಗಳಿಗೂ ಮಿಕ್ಕಿ ಜೀರ್ಣೋದ್ಧಾರ ಕಾರ್ಯ ಸರ್ವರ ಸಹಕಾರದಿಂದ ನಡೆದಿದೆ ಈ ಮಣ್ಣಿನಲ್ಲಿ ನಾಗನಡೆ ಇರುವುದು ಹಲವು ವಿಚಾರಗಳಲ್ಲಿ ಬೆಳಕಿಗೆ ಬಂದಿದ್ದು, ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿದ್ದಾರೆ ಎಂದರು
ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಮಾತನಾಡಿ, ಕಾರ್ಯಕ್ರಮಕ್ಕೆ ದಿನಗಣನೆ ಆರಂಭಗೊಂಡಿದ್ದು, ಎಲ್ಲರೂ ಮುತುವರ್ಜಿ ವಹಿಸಿ ಯಶಸ್ಸಿಗೆ ಸಹಕಾರ ನೀಡಬೇಕು ಎಂದರು.
ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ರಂಗೋಲಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ವ್ಯವಸ್ಥಾಪನ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಚಂಡಿಕಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾದಕಟ್ಟೆ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಐತಪ್ಪ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಚಂದ್ರಹಾಸ ಶೆಟ್ಟಿ ವಂದಿಸಿದರು.
Be the first to comment on "ಅನ್ನಪೂರ್ಣೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ"