ಸಜೀಪಮುನ್ನೂರು ಶಾರದಾನಗರದಲ್ಲಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆಯಿತು.
ಸಜೀಪಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಜನರ ಆರ್ಥಿಕ ಸಾಮಾಜಿಕ ಸಾಂಸ್ಕೃತಿಕ ಶೈಕ್ಷಣಿಕ ಜೀವನ ಮತ್ತು ಸುಧಾರಣೆಯಾಗಿದ್ದು ಮಹಿಳೆಯರ ಜೀವನ ವಿಕಸಿತವಾಗಿದೆ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ ಸರಕಾರದ ಹಾಗೂ ಗ್ರಾಮ ಅಭಿವೃದ್ಧಿ ಯೋಜನೆ ಎಲ್ಲಾ ಸೌಲಭ್ಯಗಳನ್ನು ಗ್ರಾಮೀಣ ಜನರು ಸದುಪಯೋಗಪಡಿಸಿ ಗ್ರಾಮೋದ್ಧಾರವಾಗಬೇಕಿದೆ ಎಂದರು
ಭಜನಾ ಮಂದಿರದ ಅಧ್ಯಕ್ಷ ಸತೀಶ್ ಗಟ್ಟಿ ಒಕ್ಕೂಟ ಅಧ್ಯಕ್ಷ ಗಂಗಾಧರ ಭಂಡಾರಿ. ಗ್ರಾಮ ಪಂಚಾಯಿತಿ ಸದಸ್ಯರಾದ ಸರೋಜಿನಿ. ದಯಾಲಕ್ಷ್ಮಿ. ಉಪಸ್ಥಿತರಿದ್ದರು ವಾರ್ಷಿಕೋತ್ಸವದ ಅಂಗವಾಗಿ ಮಹಿಳೆಯರಿಂದ ವಿವಿಧ ಆಟೋ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಸೇವಾ ನಿರತೆ ಶ್ರೀಲತಾ ಕಾರ್ಯಕ್ರಮ ನಡೆಸಿಕೊಟ್ಟರು
Be the first to comment on "ಸಜೀಪಮುನ್ನೂರು: ಜ್ಞಾನವಿಕಾಸ ಕೇಂದ್ರ ವಾರ್ಷಿಕೋತ್ಸವ"