ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಡುಮದ್ದು ತಯಾರಿಕಾ ಘಟಕದಲ್ಲಿ ಭಾನುವಾರ ನಡೆದ ಸ್ಫೋಟವೊಂದರಲ್ಲಿ ಮೂವರು ಛಿದ್ರಗೊಂಡಿದ್ದಾರೆ. ತ್ರಿಶೂರಿನ ವರ್ಗೀಸ್, ಹಾಸನದ ಚೇತನ್, ಕೇರಳದ ಸ್ವಾಮಿ ಮೃತಪಟ್ಟವರು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆ ಸುತ್ತಮುತ್ತಲಿನ ಸುಮಾರು 4 ಕಿ.ಮೀ. ವ್ಯಾಪ್ತಿವರೆಗೂ ಇತ್ತು.