ಬಂಟ್ವಾಳ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಿದ್ದಕಟ್ಟೆ ವಲಯ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಸಿದ್ಧಕಟ್ಟೆಯ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ನಡೆಯಿತು.
ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಅರ್ಕಕೀರ್ತಿ ಇಂದ್ರ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಭಾಗವಹಿಸಿದ್ದರು. ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲ ಗೌಡ ಕೋರ್ಯಾರು, ಸಿದ್ಧಕಟ್ಟೆ ವಲಯ ಅಧ್ಯಕ್ಷರಾದ ಸುರೇಶ ಅಂಚನ್, ಜನಜಾಗೃತಿ ವೇದಿಕೆ ಸಿದ್ದಕಟ್ಟೆ ವಲಯ ಅಧ್ಯಕ್ಷರಾದ ಸದಾನಂದ ಶೀತಲ್, ವಲಯ ಮೇಲ್ವಿಚಾರಕ ಶಿವರಂಜನ್ ಕೆ ಉಪಸ್ಥಿತರಿದ್ದರು. ಸುಧಾಕರ್ ಶೆಟ್ಟಿ ಕುಕ್ಕಿಪಾಡಿ ಸ್ವಾಗತಿಸಿ, ಸುರೇಶ್ ಅಂಚನ್ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಿದ್ಧಕಟ್ಟೆ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ"
Be the first to comment on "ಸಿದ್ಧಕಟ್ಟೆ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ"