ಬಂಟ್ವಾಳ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಿದ್ದಕಟ್ಟೆ ವಲಯ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಸಿದ್ಧಕಟ್ಟೆಯ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ನಡೆಯಿತು.
ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಅರ್ಕಕೀರ್ತಿ ಇಂದ್ರ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಭಾಗವಹಿಸಿದ್ದರು. ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲ ಗೌಡ ಕೋರ್ಯಾರು, ಸಿದ್ಧಕಟ್ಟೆ ವಲಯ ಅಧ್ಯಕ್ಷರಾದ ಸುರೇಶ ಅಂಚನ್, ಜನಜಾಗೃತಿ ವೇದಿಕೆ ಸಿದ್ದಕಟ್ಟೆ ವಲಯ ಅಧ್ಯಕ್ಷರಾದ ಸದಾನಂದ ಶೀತಲ್, ವಲಯ ಮೇಲ್ವಿಚಾರಕ ಶಿವರಂಜನ್ ಕೆ ಉಪಸ್ಥಿತರಿದ್ದರು. ಸುಧಾಕರ್ ಶೆಟ್ಟಿ ಕುಕ್ಕಿಪಾಡಿ ಸ್ವಾಗತಿಸಿ, ಸುರೇಶ್ ಅಂಚನ್ ವಂದಿಸಿದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)