ಜಾಹೀರಾತು
ಬಿ.ಸಿ.ರೋಡಿನ ಅಜ್ಜಿಬೆಟ್ಟಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವಂತೆ ಬ್ಯಾಂಕ್ ಆಫ್ ಬರೋಡಾದ ಬಂಟ್ವಾಳ ಶಾಖೆ ವತಿಯಿಂದ ಕಲಿಕಾ ಆಟಿಕೆಗಳನ್ನು ಮಂಗಳವಾರ ಹಸ್ತಾಂತರಿಸಲಾಯಿತು. ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ವಾಮನ್ ನಾಯಕ್ ಮತ್ತು ಸಿಬಂದಿ ಹಾಗೂ ಹಳೆ ವಿದ್ಯಾರ್ಥಿ ಚೇತನ್ ಕುಮಾರ್ ಅವರು ಮುಖ್ಯೋಪಾಧ್ಯಾಯರಾದ ಲಕ್ಷ್ಮೀ ಕೆ. ಅವರಿಗೆ ಹಸ್ತಾಂತರ ಮಾಡಿ ಇದು ಮಕ್ಕಳಿಗೆ ಉಪಯೋಗವಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭ ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಶಿಕ್ಷಕಿಯರಾದ ಪೂರ್ಣಿಮಾ, ಲಾವಣ್ಯ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಮೂಡ ಸರಕಾರಿ ಪ್ರಾಥಮಿಕ ಶಾಲೆ ಎಲ್.ಕೆ.ಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದಿಂದ ಕಲಿಕಾ ಆಟಿಕೆ ಹಸ್ತಾಂತರ"