ಪ್ರಮುಖ ಸುದ್ದಿಗಳು

ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲಿ ಕಡಲಾಮೆ: ಮಂಗಳೂರಿನಲ್ಲಿ ಮೊಟ್ಟೆಗಳ ಸಂರಕ್ಷಿಸಿಟ್ಟ ಅರಣ್ಯ ಇಲಾಖೆ

ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಸಂರಕ್ಷಿಸಿರುವುದಾಗಿ ತಿಳಿಸಿದರು.

ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಚಿವರು ಪರಿಶೀಲಿಸಿ, ಈ ಮೊಟ್ಟೆಗಳು ಮರಿಯಾದ ಬಳಿಕ ಸುರಕ್ಷಿತವಾಗಿ ಕಡಲಿಗೆ ಬಿಡುವಂತೆ ಸೂಚಿಸಿದರು. ಈ ಅಪರೂಪದ ಆಮೆಗಳ ಮೊಟ್ಟೆ ನಾಯಿ ಮತ್ತು ಪಕ್ಷಿಗಳ ಪಾಲಾಗದಂತೆ ಸುತ್ತಲೂ ಕಟ್ಟೆ ಕಟ್ಟಿ ಸಂರಕ್ಷಿಸಿರುವ ಅರಣ್ಯ ಸಿಬ್ಬಂದಿಯ ಕಾಳಜಿ ಮತ್ತು ತಣ್ಣೀರು ಬಾವಿ ಕಡಲ ತೀರವನ್ನು ಅತ್ಯಂತ ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ಕೆ.ಎಸ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಳನ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts