ವಿಟ್ಲ ಸಮೀಪ ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್ ಶಾಖೆ ಕಿಟಕಿ ಬಾಗಿಲು ಮುರಿದು ಕಳ್ಳರು ಒಳಗೆ ನುಗ್ಗಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಹಿತ ಉನ್ನತ ಅಧಿಕಾರಿಗಳ ತಂಡ ಆಗಮಿಸಿ ತನಿಖೆ ನಡೆಸಿದೆ. ಎಷ್ಟು ಪ್ರಮಾಣದ ಕಳವಾಗಿದೆ ಎಂಬುದು ವಿವರವಾದ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಜನ ಓಡಾಟ ವಿರಳವಾಗಿರುವ ಪ್ರದೇಶದಲ್ಲಿ ತೀರಾ ಹಳೆಯ ಕಟ್ಟಡದಲ್ಲಿ ಕರ್ಣಾಟಕ ಬ್ಯಾಂಕ್ ನ ಅಡ್ಯನಡ್ಕ ಶಾಖೆ ಕಾರ್ಯ ನಿರ್ವಹಿಸುತ್ತಿದೆ ಸುತ್ತಲೂ ಪೊದೆ ಗಿಡಗುಂಟೆಗಳು ಬೆಳೆದಿವೆ. ಸುದ್ದಿ ತಿಳಿದು ಸ್ಥಳದಲ್ಲಿ ಬ್ಯಾಂಕ್ ಗ್ರಾಹಕರು ಜಮಾಯಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…