ಬೆಳ್ತಂಗಡಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕ ಆಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ ರಾವ್ (45) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಬಂಟ್ವಾಳದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪತ್ನಿ ಮತ್ತು ಪುತ್ರನನ್ನು ಅವರು ಹೊಂದಿದ್ದರು.ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕ ಆಗಿ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು ಬಂಟ್ವಾಳ ಆಸ್ಪತ್ರೆಗೆ ಕರೆತಂದ ವೇಳೆ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೆಳ್ತಂಗಡಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಭೂಮಾಪಕರಾಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ ರಾವ್ ನಿಧನ"
Be the first to comment on "ಬೆಳ್ತಂಗಡಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಭೂಮಾಪಕರಾಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ ರಾವ್ ನಿಧನ"