ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ ಬಂಟ್ವಾಳ ಲಯನ್ಸ್ ಸಭಾಂಗಣದಲ್ಲಿ ಪೊಲೀಸ್ ಅಧೀಕ್ಷಕ ರಿಷ್ಯಂತ್ ಉಪಸ್ಥಿತಿಯಲ್ಲಿ ಎಲ್ಲಾ ಬ್ಯಾಂಕ್ ಮುಖ್ಯಸ್ಥರು ಗಳೊಂದಿಗೆ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿ ತೆಗೆದುಕೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ನೀಡಲಾಗಿರುವ ಸೂಚನೆಗಳನ್ನು, ಮುಂದಿನ 20 ದಿನಗಳ ಒಳಗಾಗಿ ಬ್ಯಾಂಕ್ ಗಳು ಅಳವಡಿಸಿಕೊಂಡಿರುವ ಬಗ್ಗೆ, ಆಯಾ ಠಾಣಾ ವ್ಯಾಪ್ತಿಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು, ಖುದ್ದಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಬ್ಯಾಂಕುಗಳಲ್ಲಿ ಮಿನಿಮಮ್ ಸೆಕ್ಯೂರಿಟಿ ಅಗತ್ಯ. ಅಲಾರಂ ಅಳವಡಿಸಿದ್ದು ಮೊಳಗುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಿಸಿ ಕ್ಯಾಮರಾ ಕೆಲಸ ಮಾಡುತ್ತದೆಯೇ ಎಂಬುದನ್ನು ನೋಡಿಕೊಳ್ಳಿ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಎಸ್ಪಿ ಸೂಚಿಸಿದರು. ಜಿಲ್ಲೆಯ ನಾನಾ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.