ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಗುರುವಾರ ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಬಲಿ ಉತ್ಸವ ನಡೆಯಿತು. ಬಳಿಕ ಬಟ್ಟಲು ಕಾಣಿಕೆ ನಡೆದು, ರಾಜಾಂಗಣ ಪ್ರಸಾದ ವಿತರಣೆ ನಡೆಯಿತು. ನವಕ ಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆದವು.
ಇದೇ ಸಂದರ್ಭ ಹರಕೆಯೊಪ್ಪಿಸಿದ ಸೀರೆಗಳನ್ನು ಏಲಂ ಮಾಡಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕಾರ್ಯದರ್ಶಿ ಇಂದಿರೇಶ್ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಜಾತ್ರೋತ್ಸವ ಫೆ.13ರಂದು ಆರಂಭಗೊಂಡಿದ್ದು, ಗುರುವಾರ ಸಂಪನ್ನಗೊಂಡಿತು. ಇದೇ ವೇಳೆ ದೇವಸ್ಥಾನಕ್ಕೆ ದಾನಿಗಳಿಂದ ಬೆಳ್ಳಿಯ ಕೊಡೆ ಸಮರ್ಪಿಸಲಾಯಿತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನ: ಜಾತ್ರಾ ಮಹೋತ್ಸವ, ದರ್ಶನ ಬಲಿ ಉತ್ಸವ"