ಬಂಟ್ವಾಳ

ಬೊಂಡಾಲ ಯಕ್ಷಗಾನ ಬಯಲಾಟ ಸುವರ್ಣ ಸಂಭ್ರಮ: ಬೊಂಡಾಲ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ

ಯಕ್ಷಗಾನ ಮತ್ತು ಕಲಾದೃಷ್ಟಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಯಕ್ಷಗಾನ ಪ್ರಾಧಿಕಾರ ನಿರ್ಮಾಣದ ಕುರಿತ ಪ್ರಯತ್ನಿಸಲಾಗುವುದು, ತನ್ನ ಸಹಕಾರ ಅದಕ್ಕಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಯಕ್ಷಗಾನ ಬಯಲಾಟದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಕಲಾವಿದ ಅಮ್ಮುಂಜೆ ಮೋಹನ ಕುಮಾರ್ ಅವರಿಗೆ ಬೊಂಡಾಲ ಪ್ರಶಸ್ತಿ, ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಮತ್ತು ಸಾಲಿಗ್ರಾಮ ಮೇಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರಿಗೆ ಸುವರ್ಣ ಸಂಭ್ರಮ ಸನ್ಮಾನ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.

ನಾಡಿನ ಸಂಸ್ಕೃತಿಯನ್ನು ಭವಿಷ್ಯಕ್ಕೆ ವರ್ಗಾಯಿಸುವ ಕೆಲಸವನ್ನು ಕರಾವಳಿಯ ಯಕ್ಷಗಾನ ಮಾಡುತ್ತಿದ್ದು, ನಮ್ಮ ನಾಡಿನಲ್ಲಿ ಯಕ್ಷಗಾನ ಮತ್ತು ಕಂಬಳ ಕರಾವಳಿಯ ಎರಡು ಕಣ್ಣುಗಳಿದ್ದಂತೆ ಎಂದ ಖಾದರ್, ದಿವಂಗತ ಬೊಂಡಾಲ ಜಗನ್ನಾಥ ಶೆಟ್ಟಿ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದರು.

ಈ ಸಂದರ್ಭ ವಾಸುದೇವ ಕಾರಂತ ನರಿಕೊಂಬು, ಪದ್ಮನಾಭ ಮಯ್ಯ ಏಲಬೆ ಅವರನ್ನು ಗೌರವಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿ, ಯಕ್ಷಗಾನದ ಪರಂಪರೆಯನ್ನು ಉಳಿಸಲು ಬೊಂಡಾಲದ ಸಚ್ಚಿದಾನಂದ ಶೆಟ್ಟಿ ಕುಟುಂಬ ಮತ್ತು ಊರವರು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಶುಭ ಹಾರೈಸಿದರು. ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಯಕ್ಷಗಾನ ಹಿರಿಯ ಕಲಾವಿದ, ವಿಮರ್ಶಕ, ವಿದ್ವಾಂಸ ಡಾ.ಎಂ.ಪ್ರಭಾಕರ ಜೋಷಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಸಮಿತಿಯ ಗೌರವಾಧ್ಯಕ್ಷ ಬಿ.ಸೀತಾರಾಮ ಶೆಟ್ಟಿ ಮಂಗಳೂರು, ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಸುವರ್ಣ ಸಂಭ್ರಮ ಕಾರ್ಯಾಧ್ಯಕ್ಷ ಪದ್ಮನಾಭ ಮಯ್ಯ ಏಲಬೆ ಉಪಸ್ಥಿತರಿದ್ದರು. ಸಮಿತಿ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷ ಸೀತಾರಾಮ ಶೆಟ್ಟಿ ಮಂಗಳೂರು ವಂದಿಸಿದರು. ಸುವರ್ಣ ಸಂಭ್ರಮ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಇದೇ ವೇಳೆ ಕಟೀಲು ಮೇಳದಿಂದ ಶ್ರೀ ದೇವಿ ಲಲಿತೋಪಾಖ್ಯಾನ ಯಕ್ಷಗಾನ ಬಯಲಾಟ ನಡೆಯಿತು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ