ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಫೆ. 17 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆಬ್ರವರಿ 17ರಂದು ಬೆಳಿಗ್ಗೆ 9 ಗಂಟೆಗೆ ಬಿ.ಸಿ. ರೋಡ್‍ನಲ್ಲಿ ಬಡಾಜೆ ರವಿಶಂಕರ್ ಶೆಟ್ಟಿ ಮನೆಗೆ ಭೇಟಿ, 9.30ಕ್ಕೆ ಬಿ.ಸಿ ರೋಡ್ ಪೊಲೀಸ್ ಕ್ವಾಟ್ರಸ್ ಅನ್ನಪೂರ್ಣೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ, ಬೆಳಿಗ್ಗೆ 10.30ಕ್ಕೆ ಗಂಜಿಮಠ ಸೂರಲ್ಪಾಡಿ ಝರಾ ಕನ್ವೆನ್ಷನ್ ಸೆಂಟರ್‍ನಲ್ಲಿ ಬ್ಯಾರೀಸ್ ವೆಲ್‍ಫೇರ್ ಫೋರಂ ಅಬುದಾಬಿ ಅವರ ಆಯೋಜನೆಯ ಸಾಮೂಹಿಕ ವಿವಾಹ ಕಾರ್ಯಕ್ರಮ, ಬೆಳಿಗ್ಗೆ 11.25ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ, ಮಧ್ಯಾಹ್ನ 12.30ಕ್ಕೆ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ, ಸಂಜೆ 6 ಗಂಟೆ – ವಾಮಂಜೂರು ತಿರುವೈಲುಗುತ್ತು ತಿರುವೈಲೋತ್ಸವ ಕಂಬಳ ಕಾರ್ಯಕ್ರಮ, ರಾತ್ರಿ 8.10ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.