ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯನ್ನು ಹಾಗೂ ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಆ ಪ್ರದೇಶದಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…